ದಿಗಂತ್ ಅಭಿನಯದ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಸಿನಿಮಾ ಈಗ ರಿಲೀಸ್‌ಗೆ ರೆಡಿಯಾಗಿದೆ. ಚಿತ್ರ ತನ್ನ ಶೀರ್ಷಿಕೆಯಿಂದಲೇ ಜೋರು ಸುದ್ದಿ ಮಾಡಿತ್ತು. ಈಗ ತನ್ನೆಲ್ಲಾ ಕೆಲಸಗಳನ್ನು ಪೂರೈಸಿಕೊಂಡು ರಿಲೀಸ್ ಆಗೋಕೆ ಸಜ್ಜಾಗುತ್ತಿದೆ. ಹೌದು, ಇದೇ ಮೊದಲ ಬಾರಿಗೆ ನಿರ್ದೇಶಕರಾಗಿರುವ ವಿನಾಯಕ ಕೋಡ್ಸರ ತಮ್ಮ ಚೊಚ್ಚಲ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ಬಗ್ಗೆ ಅವರು ಹೇಳುವುದಿಷ್ಟು…
ಚಿತ್ರ ನಿರ್ಮಾಣ ಮಾಡುವುದು ಎಷ್ಟು ಕಷ್ಟವೋ, ಜನರಿಗೆ ತಲುಪಿಸೋದು ಅದಕ್ಕಿಂತಲೂ ಕಷ್ಟ. ಈ ಚಿತ್ರಕ್ಕೆ ಬಿ.ಜಿ. ಮಂಜುನಾಥ್ ನಿರ್ಮಾಪಕರು. “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ದಿಗಂತ್ ಚಿತ್ರದ ಹೈಲೈಟ್. ಐಂದ್ರಿತಾ ರೇ ಮತ್ತು ರಜನಿ ರಾಘವನ್ ಅವರ ಜೊತೆಯಲ್ಲಿದ್ದಾರೆ. ಇನ್ನು, ಚಿತ್ರಕ್ಕೆ ರವೀಂದ್ರ ಜೋಶಿ ಕಾರ್ಯಕಾರಿ ನಿರ್ಮಾಪಕರು.
ಬಿಡುಗಡೆಗೂ ಮುನ್ನ, ಚಿತ್ರತಂಡ ವಿನೂತನ ಪ್ರಚಾರಕ್ಕೆ ನಾಂದಿ ಹಾಡಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಟಿ.ಎಸ್.ಎಸ್ ಅಡಿಕೆ ವ್ಯಾಪಾರಿ ಅಂಗಳ ಅಂದರೆ ಬಹು ಖ್ಯಾತಿ. ಇದರ ಸಹಯೋಗದೊಂದಿಗೆ ಫೆ. 20ರಂದು ಮಧ್ಯಾಹ್ನ ಮೂರರಿಂದ ಸಂಜೆ ಐದು ಮುವತ್ತರವರೆಗೂ ಅಡಿಕೆ ಸುಲಿಯುವ ಸ್ಪರ್ಧೆ ಏರ್ಪಡಿಸಲಾಗಿದೆ.
ಶಿರಸಿಯ ಟಿ.ಎಸ್.ಎಸ್ ಪ್ರಾಂಗಣದಲ್ಲಿ ಈ ಸ್ಪರ್ಧೆ ನಡೆಯಲಿದೆ. ಸುಮಾರು 200 ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ವಿಜೇತರಿಗೆ ಬಹುಮಾನವೂ ಇದೆ. ದಿಗಂತ್, ಐಂದ್ರಿತ ರೆ , ರಂಜನಿ ರಾಘವನ್ ಹಾಗೂ ಚಿತ್ರತಂಡದ ಬಹುತೇಕ ಸದಸ್ಯರು ಅಂದು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಅಂದಹಾಗೆ ಚಿತ್ರದಲ್ಲಿ ದಿಗಂತ್ ಅಡಿಕೆ ಬೆಳೆಗಾರನಾಗಿದ್ದು, ಅಡಿಕೆ ಜೊತೆ ಪಾತ್ರದ ನಂಟಿದೆ. ಹೀಗಾಗಿ ಮಲೆನಾಡಿನ ಜೀವನಾಡಿಯಾದ ಅಡಿಕೆ ಸುಲಿಯುವ ಸ್ಪರ್ಧೆ ಆಯೋಜಿಸಲಾಗಿದೆ ಎಂಬುದು ನಿರ್ದೇಶಕ ವಿನಾಯಕ ಕೋಡ್ಸರ ಮಾತು.