ಕಾಶ್ಮೀರದಲ್ಲಿ ಧ್ರುವ ಸರ್ಜಾ ಸ್ಟಂಟ್!‌ ಚಳಿಯಲ್ಲಿ ಮಾರ್ಟಿನ್ ಸಖತ್ ಆ್ಯಕ್ಷನ್…

ಎ.ಪಿ. ಅರ್ಜುನ್‌ ನಿರ್ದೇಶನದ ಅದ್ಧೂರಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಧ್ರುವ ಸರ್ಜಾ, ಮತ್ತೊಮ್ಮೆ ಅದೇ ನಿರ್ದೇಶಕರ ಜೊತೆ ಕೆಲಸ ಮಾಡುತ್ತಿದ್ದಾರೆ. ಅದು ಮಾರ್ಟಿನ್. ವಾಸವಿ ಎಂಟರ್ ಪ್ರೈಸಸ್ ಮೂಲಕ ಉದಯ್ ಕೆ.ಮೆಹ್ತಾ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರದ ಚಿತ್ರೀಕರಣ ಈಗ ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ಒಂದು ವಾರದಿಂದ ನಡೆಯುತ್ತಿದೆ.


ಕಳೆದ 8 ದಿನಗಳಿಂದ ಕಾಶ್ಮೀರದಲ್ಲಿ ಮೈನಸ್ 7 ಡಿಗ್ರಿ ತಾಪಮಾನ ಇರುವ ಲೊಕೇಶನ್ ಗಳಲ್ಲಿ ಚಿತ್ರತಂಡ ಶೂಟಿಂಗ್ ನಡೆಸುತ್ತಿದೆ. ಕಾಶ್ಮೀರದ ಐಸ್ ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್ ಗಳನ್ನು ಅಲ್ಲಿ ಚಿತ್ರೀಕರಿಸಲಾಗುತ್ತಿದೆ. ಈ ಚಿತ್ರೀಕರಣದಲ್ಲಿ ನಾಯಕ ಧೃವಸರ್ಜಾ, ನಾಯಕಿ ವೈಭವಿ ಶಾಂಡಿಲ್ಯ, ಚಿಕ್ಕಣ್ಣ ಹಾಗೂ ಸಹ ಕಲಾವಿದರುಗಳು ಭಾಗವಹಿಸಿದ್ದಾರೆ. ಆಕ್ಷನ್ ಸೀನ್ ಜೊತೆಗೆ ಮಾತಿನಭಾಗ ಸೇರಿದಂತೆ ಚಿತ್ರದ ಪ್ರಮಖವಾದ ದೃಶ್ಯಗಳನ್ನು ಅಲ್ಲಿ ಸೆರೆ ಹಿಡಿಯಲಾಗುತ್ತಿದೆ.

ಇನ್ನೂ 8 ದಿನಗಳ ಕಾಲ ಅಲ್ಲೇ ಶೂಟಿಂಗ್ ನಡೆಸಲಿರುವ ಮಾರ್ಟಿನ್ ಚಿತ್ರತಂಡ ಒಟ್ಟು 16 ದಿನಗಳ ಶೂಟಿಂಗ್ ಶೆಡ್ಯೂಲ್ ಹಾಕಿಕೊಂಡಿದೆ.
ಆ್ಯಕ್ಷನ್, ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಅವರು ಹೊಸ ಮಾದರಿಯ ಮೇಕಿಂಗ್ ಟ್ರೈ ಮಾಡಿದ್ದಾರೆ.

ಎಲ್ಲಾ ಭಾಗಕ್ಕೂ ಸಲ್ಲುವ ಕಥೆ ಇದಾಗಿರುವುದರಿಂದ, ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ‌ ಮಾರ್ಟಿನ್ ಚಿತ್ರ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ದೊಡ್ಡ ಹೆಸರು ಮಾಡಿರುವ ಮಣಿಶರ್ಮಾ ಅವರು ಸಂಗೀತ ನೀಡುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನವಿದೆ.

Related Posts

error: Content is protected !!