ಜೇಮ್ಸ್‌ ದಾಖಲೆ ಗಳಿಕೆ! ಶೀಘ್ರವೇ ಸೇರಲಿದೆ ನೂರು ಕೋಟಿ ಕ್ಲಬ್…‌

ಡಾ.ಪುನೀತ್‌ ರಾಜಕುಮಾರ್‌ ಅವರ ಜೇಮ್ಸ್‌ ಚಿತ್ರಕ್ಕ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಯಾವ ಕನ್ನಡ ಸಿನಿಮಾಗಳಿಗೂ ಸಿಗದಂತಹ ಅದ್ಭುತ ಓಪನಿಂಗ ಜೇಮ್ಸ್‌ ಚಿತ್ರಕ್ಕೆ ಸಿಕ್ಕಿದೆ. ಬೆಂಗಳೂರಲ್ಲೇ ರಿಲೀಸ್‌ ಮುನ್ನ ಸುಮಾರು ಒಂದು ಕೋಟಿ ರೂ. ಮೌಲ್ಯದ ಟೆಕೆಟ್‌ ಸೇಲ್‌ ಆಗಿತ್ತು ಅನ್ನೋದು ವಿಶೇಷ. ಬೆಂಗಳೂರು ಮಾತ್ರವಲ್ಲ, ರಾಜ್ಯಾದ್ಯಂತ ಕೂಡ ಚಿತ್ರ ಅದ್ಧೂರಿಯಾಗಿಯೇ ಓಪನಿಂಗ್‌ ಕಂಡಿದೆ. ಜೇಮ್ಸ್‌ ಗಳಿಕೆಯಲ್ಲಿ ಕನ್ನಡದ ಎಲ್ಲಾ ಸಿನಿಮಾಗಳ ದಾಖಲೆ ಮುರಿಯುತ್ತದೆ ಎಂಬ ಲೆಕ್ಕಾಚಾರವನ್ನುಗಾಂಧಿನಗರ ಮಂದಿ ಹಾಕಿದ್ದರು. ಮೊದಲ ದಿನ ಶೇ.೯೦ಕ್ಕೂ ಹೆಚ್ಚ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ ಪ್ರದರ್ಶನ ಕಂಡಿದೆ. ಪರ ರಾಜ್ಯ ಮತ್ತು ವಿದೇಶಗಳಲ್ಲೂ ಜೇಮ್ಸ್‌ ಚಿತ್ರಕ್ಕೆ ಅದ್ಭುತ ಓಪನಿಂಗ್‌ ಸಿಕ್ಕಿದೆ.

ಹಾಗಾದರೆ, ಜೇಮ್ಸ್‌ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು? ಈ ಪ್ರಶ್ನೆ ಸಹಜವಾಗಿಯೇ ಹರಿದಾಡುತ್ತಿದೆ. ಜೇಮ್ಸ್‌ ಸಿನಿಮಾ ಮೊದಲ ದಿನ ಸುಮಾರು 33 ಕೋಟಿ ರೂ.ಗೂ ಹೆಚ್ಚು ಮೊತ್ತದ ಗಳಿಕೆ ಪಡೆದಿದೆ ಎಂದು ಹೇಳಲಾಗುತ್ತಿದೆ. ಇದು ಪುನೀತ್ ರಾಜಕುಮಾರ್‌ ಅವರ ಕೊನೆಯ ಚಿತ್ರ ಅನ್ನುವ ಕಾರಣಕ್ಕೆ ಎಲ್ಲೆಡೆಯಿಂದಲೂ ಅಭಿಮಾನಿಗಳು ಚಿತ್ರ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 33 ಕೋಟಿ ಕೋಟಿ ಗಳಿಕೆಯಾಗಿದ್ದು, ಹೊರ ರಾಜ್ಯ ಹಾಗು ವಿದೇಶಗಳಲ್ಲೂ ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಂಡಿದೆ. ಅವೆಲ್ಲದರ ಗಳಿಕೆಯನ್ನು ಸೇರಿಸಿ ಅಂದಾಜಿಸಿದರೆ ಮೊದಲ ದಿನದ ಗಳಿಕೆ ಸುಮಾರು 45 ಕೋಟಿಯಷ್ಟು ಆಗಬಹುದು.

ಮೊದಲ ದಿನ ಕರ್ನಾಟಕದಲ್ಲಿ 33 ಕೋಟಿಯಷ್ಟು ಗಳಿಕೆ ಕಂಡಿರುವ ‘ಜೇಮ್ಸ್’ ಈ ವಾರ ಮತ್ತಷ್ಟು ಗಳಿಕೆ ಮಾಡಲಿದೆ. ಹಾಗೆ ನೋಡಿದರೆ ಮುಂದಿನ ಮೂರು ದಿನಗಳಲ್ಲಿ ಸುಮಾರು 70 ಕೋಟಿ ಗಳಿಕೆ ದಾಟಬಹುದು ಎಂದು ಅಂದಾಜಿಸಲಾಗುತ್ತಿದೆ. ‘ಜೇಮ್ಸ್’ ಚಿತ್ರ ಬಿಡುಗಡೆ ಆಗಿದ್ದರಿಂದ ಯಾವೊಂದು ಸಿನಿಮಾ ಕೂಡ ಸ್ಪರ್ಧೆಗೆ ಬಂದಿಲ್ಲ. ಹಾಗಾಗಿ ಗಳಿಕೆಯಲ್ಲಿ ಹೊಸ ದಾಖಲೆ ಬರೆಯಬಹುದು ಎನ್ನಲಾಗುತ್ತಿದೆ. ಆದಷ್ಟು ಬೇಗ ಜೇಮ್ಸ್ ನೂರು ಕೋಟಿ ಕ್ಲಬ್ ಸೇರಿದರೂ ಅಚ್ಚರಿಯಿಲ್ಲ. ಅದೇನೆ ಇರಲಿ, ಜೇಮ್ಸ್‌ ಕನ್ನಡದಲ್ಲಿ ಗ್ರಾಂಡ್‌ ಓಪನಿಂಗ್‌ ಪಡೆದಿದೆ. ನಿಜಕ್ಕೂ ಅದೊಂದು ದೊಡ್ಡ ದಾಖಲೆಯೇ ಸರಿ. ಇತ್ತೀಚಿನ ವರ್ಷಗಳಲ್ಲಿ ಯಾವ ಸಿನಿಮಾಗಳು ಸಹ ಈ ಮೊಟ್ಟದ ಓಪನಿಂಗ್‌ ಪಡೆದುಕೊಂಡಿರಲಿಲ್ಲ.

Related Posts

error: Content is protected !!