ಭಯಂಕರ ನಟನಿಗೆ ಮದಗಜ ಸಾಥ್!‌ ಪ್ರಥಮ್‌ ಸಿನಿಮಾ ಹಾಡು ರಿಲೀಸ್‌ ಮಾಡಿ ಶುಭ ಹಾರೈಸಿದ ಶ್ರೀಮುರಳಿ

ನಟ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಅವರೇ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಬಿಡುಗಡೆಯಾದವು. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ. ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು.

ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ, ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಹಾರೈಸಿದರು.

ಜಿಲ್ಲಾಧಿಕಾರಿ ದಯಾನಂದ್, ಲಹರಿ ವೇಲು ಹಾಗೂ ವಿ.ನಾಗೇಂದ್ರಪ್ರಸಾದ್ ಸಹ ಪ್ರಥಮ್ ಬಗ್ಗೆ ಮೆಚ್ಚುಗೆಯ ಮಾತನಾಡಿ ಚಿತ್ರಕ್ಕೆ ಶುಭ ಕೋರಿದರು.

ಮಾತಿಗಿಳಿದ ಪ್ರಥಮ್‌, ಇದು ನನ್ನ ಮೊದಲ ನಿರ್ದೇಶನದ ಚಿತ್ರ.
ಬಾರಿ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು.

ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ. ಮೇ ಹದಿಮೂರರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು. ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.

Related Posts

error: Content is protected !!