ಸೂರ್ಯ – ಸೋನಾಲ್ ಮಾಂತೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಗರಡಿ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ ಕಾಣಿಸಿಕೊಳ್ಳುತ್ತಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ “ಗರಡಿ” ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಸಚಿವ, ನಟ ಮತ್ತು ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್, ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಗರಡಿ ಮನೆಯಲ್ಲಿ ತರಬೇತಿ ಪಡೆದಿರುವ ಸಾಕಷ್ಟು ಕುಸ್ತಿ ಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂತೆರೊ, ಕೌರವ ಬಿ.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ವಿ.ಹರಿಕೃಷ್ಣ ಅವರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಸೂರ್ಯ, ಸೋನಾಲ್ ಮಾಂತೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ (ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದಲ್ಲಿದ್ದಾರೆ.