ಬಾನದಾರಿಯಲ್ಲಿ ಗಣೇಶ್ ಸಂಚಾರ! ಮತ್ತೆ ಪ್ರೀತಂ ಗುಬ್ಬಿ ಜೊತೆಯಾದ ಗೋಲ್ಡನ್ ಸ್ಟಾರ್…

“ಮಳೆಯಲಿ ಜೊತೆಯಲಿ” ಸಿನಿಮಾಗೆ ಜೊತೆಯಾಗಿದ್ದ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಜೋಡಿ ಈಗ ಹೊಸ ಚಿತ್ರ”ಬಾನದಾರಿಯಲ್ಲಿ” ಮೂಲಕ ಸಾಗಲಿದೆ.

ಇವರಿಬ್ಬರ ಕಾಂಬಿನೇಶನಲ್ಲಿ ಬರುತ್ತಿರುವ ಈ ಚಿತ್ರಕ್ಕೆ “ಬಾನದಾರಿಯಲ್ಲಿ” ಎಂದು ಹೆಸರಿಡಲಾಗಿದೆ. ಮೇನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಯುಗಾದಿ ಹಬ್ಬದ ಶುಭದಿನದಂದು ಪೋಸ್ಟರ್ ಬಿಡುಗಡೆಯಾಗಿದೆ.

ಪ್ರೀತಂಗುಬ್ಬಿ ನಿರ್ದೇಶನದಲ್ಲಿ ಗಣೇಶ್ ಈ ಹಿಂದೆ “ಮಳೆಯಲಿ ಜೊತೆಯಲಿ” , “ದಿಲ್ ರಂಗೀಲಾ” ಹಾಗೂ “99” ಚಿತ್ರಗಳಲ್ಲಿ ನಟಿಸಿದ್ದರು. ಇದು ಅವರ ಕಾಂಬಿನೇಷನ್ ನ ನಾಲ್ಕನೇ ಚಿತ್ರ. “ಬಾನದಾರಿಯಲ್ಲಿ” ಗೆ ನೋಡು ಎಂಥಾ ಚೆಂದ ಎಂಬ ಅಡಿಬರಹವಿದೆ.

ವಿ.ಹರಿಕೃಷ್ಣ ಸಂಗೀತ ನಿರ್ದೇಶನ, ಪ್ರೀತ ಜಯರಾಂ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಪುನೀತ್ ರಾಜಕುಮಾರ್ ಅವರು ಹಾಡಿದ್ದ “ಬಾನದಾರಿಯಲ್ಲಿ” ಹಾಡು ಇಂದಿಗೂ, ಎಂದೆಂದಿಗೂ ಜನಪ್ರಿಯ.. ಆ ಹಾಡಿನ ಮೊದಲ ಪದವೇ‌ ಈ ಚಿತ್ರದ ಶೀರ್ಷಿಕೆಯಾಗಿದ್ದು, ಆ ಹಾಡಿನಷ್ಟೇ ಈ ಚಿತ್ರ ಕೂಡ ಯಶಸ್ಸು ಕಾಣಲಿ ಅನ್ನೋದು ಹಾರೈಕೆ.

Related Posts

error: Content is protected !!