ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ.
ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ.
ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕು. ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.