ಚಿರು ಕೊನೆ ಸಿನಿಮಾ ರಾಜ ಮಾರ್ತಾಂಡ ರಿಲೀಸ್ ಗೆ ರೆಡಿ; ಅಣ್ಣನಿಗೆ ಧ್ರುವ ಸರ್ಜಾ ಧ್ವನಿ..

ಚಿರಂಜೀವಿ ಅಗಲಿ ಎರಡುವರ್ಷಗಳಾಗುತ್ತಿದೆ.
ಅವರ ಅಭಿನಯದ ಕೊನೆಯ ಚಿತ್ರ “ರಾಜ ಮಾರ್ತಾಂಡ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಧ್ರುವ ಸರ್ಜಾ ಧ್ವನಿ ನೀಡಿರುವ ಈ ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು. ಹಾಗೆ ಟ್ರೇಲರ್ ಗೆ ಧ್ರುವ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ. ದರ್ಶನ್ ಸರ್ ಸಹ ವಾಯ್ಸ್ ಓವರ್ ಕೊಡುವುದಾಗಿ ಹೇಳಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ. ಜೂನ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ದಿನಾಂಕ ನಿಗದಿಯಾಗಿದೆ. ಆದರೆ ಕೊರೋನ ನಾಲ್ಕನೇ ಅಲೆಯ ಪರಿಸ್ಥಿತಿ ನೋಡಿಕೊಂಡು ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ರಾಮ್ ನಾರಾಯಣ್.

ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಬೇಕೆಂದು ಕೊಂಡಿದ್ದೇವೆ. ಚಿರು ಅವರ 111 ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ ಹಾಗೂ ರಾಯನ್ ರಾಜ್ ಸರ್ಜಾ ಅವರ 51 ಎತ್ತರದ ಕಟೌಟ್ ಸಹ ನಿಲಿಸಲಿದ್ದೀವಿ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಶಿವಕುಮಾರ್.

ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಸದಾ ನಿಮಗೆ ಇರುತ್ತದೆ ಎಂದರು ಮೇಘನಾರಾಜ್.

ನಟ ಸುಂದರರಾಜ್, ನಾಯಕಿ ದೀಪ್ತಿ ಸಾಥಿ, ಮತ್ತೊಬ್ಬ ನಾಯಕಿ ಟಗರು ಖ್ಯಾತಿಯ ಋಶಿಕಾ ರಾಜ್ (ತ್ರಿವೇಣಿ ಈಗ ಋಶಿಕಾ ರಾಜ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ‌), ಚಿರು ಮಿತ್ರರಾದ ಮನೀಷ್, ಸಚಿನ್ ಮುಂತಾದವರು “ರಾಜ ಮಾರ್ತಾಂಡ” ಚಿತ್ರದ ಬಗ್ಗೆ ಮಾತನಾಡಿದರು.

ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related Posts

error: Content is protected !!