ಪ್ರಾರಂಭಕ್ಕೆ ವಿಶೇಷ ಆಹ್ವಾನ! ಕ್ರೇಜಿ ಪುತ್ರನ ಸಿನಿಮಾಗೆ ಸ್ಪೆಷಲ್ ಎಫೆಕ್ಟ್ಸ್…

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಆಹ್ವಾನಿಸುವ ವಿಶೇಷ ಆಹ್ವಾನ ಪತ್ರಿಕೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮದುವೆಯ ಆಮಂತ್ರಣ ಪತ್ರಿಕೆ ಶೈಲಿಯಲ್ಲಿ ಇದು ತಯಾರಾಗಿದೆ.‌ ಈ ಆಹ್ವಾನ ಪತ್ರಿಕೆ ನೋಡಿ ಮನುರಂಜನ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮನುರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಕಲ್ಕೇರಿ ಅಭಿನಯಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ.

ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕರು.

ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ‌ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Related Posts

error: Content is protected !!