‘ಗುಳ್ಟು’ ಸಿನಿಮಾದ ನವೀನ್ ಹಾಗೂ ಚಂದನವನದ ಶಾಕುಂತಲೆ ಐಶಾನಿ ಶೆಟ್ಟಿ ಜೋಡಿಯಾಗಿ ನಟಿಸಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಸಿನಿರಸಿಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗೌಸ್ ಪೀರ್ ಬರೆದಿರುವ ಮಾತು ಮಾತಲ್ಲೇ ಎಂಬ ಮೆಲೋಡಿ ಹಾಡಿಗೆ ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಅಷ್ಟೇ ಸೊಗಸಾದ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಧ್ವನಿಯಲ್ಲಿ ಹಾಡಿದ್ದಾರೆ.
ಹೈಪರ್ ಶೈಲಿಯ ಸಿನಿಮಾವಾಗಿರುವ
ಧರಣಿ ಮಂಡಲ ಮಧ್ಯದೊಳಗೆ ಚಿತ್ರಕ್ಕೆ ಈ ಹಿಂದಿ ಪೂರಿ ಜಗನ್ನಾಥ್ ಜೊತೆ ಕೆಲಸ ಮಾಡಿದ್ದ ಶ್ರೀಧರ್ ಷಣ್ಮುಖ ಆಕ್ಷನ್ ಕಟ್ ಹೇಳಿದ್ದಾರೆ.
ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಬಂಡವಾಳ ಹೂಡಿದ್ದಾರೆ. ಕೀರ್ತನ್ ಪೂಜಾರಿ ಛಾಯಗ್ರಹಣ, ಗೌಸ್ ಪೀರ್ ,ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.