ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯ ಪ್ರಕಾಶ್ ಅವರ ಹೊಸ ಸಿನಿಮಾ, ಮ್ಯಾನ್ ಆಫ್ ದ ಮ್ಯಾಚ್ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಪೆಂಡೆಂಮಟ್ ಪಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ಫೆಸ್ಟಿವಲ್ ಆಫ್ ಸಿನಿಮಾ, ತನ್ನ ಆರನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, ಆಗಸ್ಟ್ 5 ರಿಂದ 14, 2022 ರಿಂದ ನಡೆಯಲಿದೆ. ಕೊರೋನಾ ನಂತರ ಮೊದಲ ಬಾರಿಗೆ, ಫಿಸಿಕಲ್ ಆಗಿ ನಡೆಯಲಿರುವ ಫೆಸ್ಟಿವಲ್, ನ್ಯೂಯಾರ್ಕ್‌ನ ಕ್ವೀನ್ಸ್‌ನಲ್ಲಿರುವ ರೀಗಲ್ ಯೂಎ ಮಿಡ್‌ವೇ ಥಿಯೇಟರನಲ್ಲಿ ಚಿತ್ರೋತ್ಸವ ನಡೆಯಲಿದೆ.
ಚಲನಚಿತ್ರವನ್ನು ನೋಡಿದ ವಿಮರ್ಶಕ, ಲಾರೆನ್ಸ್ ವೈಟ್ನರ್, ನಿರ್ದೇಶಕರನ್ನ ಅಭಿನಂದಿಸಿ ಟ್ವೀಟ್ ಮಾಡಿ ‘ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್‍ಗಾಗಿ ನೋಡಿದ ಒಂದು ಅದ್ಭುತವಾದ ಭಾರತೀಯ ವ್ಯಂಗ್ಯಭರಿತ ಚಿತ್ರ. … ನಾನು ಅದಕ್ಕೆ 10/10 ನೀಡಿದ್ದೇನೆ’ ಎಂದು ಟ್ವೇಟ್ ಮಾಡಿದ್ದಾರೆ.
ರಾಮಾ ರಾಮಾ ರೇ ಮತ್ತು ಒಂದಲ್ಲಾ ಎರಡಲ್ಲಾ ಸಿನಿಮಾಗಳ ಯಶಸ್ಸಿನ ನಂತರ ಸತ್ಯ ಪ್ರಕಾಶ್ ನಿರ್ದೇಶಿಸಿರುವ ಮೂರನೇ ಚಿತ್ರ, ಮ್ಯಾನ್ ಆಫ್ ದಿ ಮ್ಯಾಚ್ . ಸತ್ಯ ಮತ್ತು ಮಯೂರ ಪಿಕ್ಚರ್ಸ್ ಸಹಯೋಗದಲ್ಲಿ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸಿದೆ.
ಆಡಿಷನ್‌ಗೆ ಕರೆದ ನಿರ್ದೇಶಕ, ಆಡಿಷನ್‌ಗೆ ಹಾಜರಾಗುವ ಕಲಾವಿದರ ನಡುವೆ ಘರ್ಷಣೆಯನ್ನು ಸೃಷ್ಟಿಸುವ ಮೂಲಕ ಚಲನಚಿತ್ರವನ್ನು ಮಾಡುತ್ತಾರೆ. ದೊಡ್ಡ ಪಾತ್ರವರ್ಗ ಹೊಂದಿರುವ ಮತ್ತು ಪ್ರಸ್ತುತ ಸಾಮಾಜಿಕ ಸಂಘರ್ಷಗಳನ್ನು ಹಾಸ್ಯಮಯ ಮತ್ತು ವಿಡಂಬನಾತ್ಮಕ ರೀತಿಯಲ್ಲಿ ಸ್ಪರ್ಶಿಸುವ ಚಿತ್ರವಾಗಿದೆ.
ನಟರಾಜ್ ಎಸ್ ಭಟ್ ಮತ್ತು ಧರ್ಮಣ್ಣ ಕಡೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ, ಇಬ್ಬರೂ ರಾಮಾ ರಾಮಾ ರೇ ನಂತರ ಸತ್ಯ ಪ್ರಕಾಶ್ ಅವರೊಂದಿಗೆ ಒಟ್ಟಿಗೆ ಬರುತ್ತಿದ್ದಾರೆ. ಅಥರ್ವ ಪ್ರಕಾಶ್ ಮತ್ತು ಮಯೂರಿ ನಟರಾಜ್ ಅವರಂತಹ ಹೊಸಬರೊಂದಿಗೆ ವೀಣಾ ಮತ್ತು ಸುಂದರ್ ಕೂಡ ಈ ಚಿತ್ರದಲ್ಲಿ ತಮ್ಮ ನಿಜ ಜೀವನದ ಪಾತ್ರವನ್ನು ನಿರ್ವಹಿಸಿದ್ದಾರೆ.
ವಾಸುಕಿ ವೈಭವ್ ಸಂಗೀತ ಸಂಯೋಜಿಸುವುದರ ಜೊತೆಗೆ, ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರವು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.
ಮೇ 2 ರಂದು ಟ್ರೇಲರ್ ಬಿಡುಗಡೆಯಾದ ಮೊದಲ 24 ಗಂಟೆಗಳಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿತ್ತು.