ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅಚರ ಕೈಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್ ಮಾಡಿ ಶಿವಣ್ಣನ ಜನುಮದಿನಕ್ಕೆ ಶುಭಾಶಯ ಕೋರಿದೆ.
ಆಗಸ್ಟ್ ನಲ್ಲಿ ಟೈಟಲ್ ರಿವೀಲ್
ಮಹಾಭಾರತದ ವೀರರಲ್ಲಿ ಒಬ್ಬರಾದ ಅಶ್ವತ್ಥಾಮ ಸಾಹಸಗಾಥೆಯನ್ನು ಆಧಾರಿಸಿ ತಯಾರಾಗಲಿರುವ ಈ ಸಿನಿಮಾದ ಟೈಟಲ್ ನ್ನು ಆಗಸ್ಟ್ ತಿಂಗಳ ಮೊದಲ ವಾರ ರಿವೀಲ್ ಆಗಲಿದೆ. ಟೈಟಲ್ ಬಳಿಕ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಕೊಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ. ಇದೊಂದು ಪಕ್ಕಾ ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್ಎಕ್ಸ್ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ.