ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ ರೇಮೊ ರೆಡಿ: ನವೆಂಬರ್ 25ರಂದು ರಿಲೀಸ್…

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸಿ.ಆರ್. ಮನೋಹರ್ ಅವರ ನಿರ್ಮಾಣದ , ಉತ್ತಮ ಪ್ರೇಮಕಥೆಯುಳ್ಳ ಚಿತ್ರಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ನಿರ್ದೇಶನದ ಹಾಗು ಸ್ಪುರದ್ರೂಪಿ ನಟ ಇಶಾನ್ – ಆಶಿಕಾ ರಂಗನಾಥ್ ನಾಯಕ-ನಾಯಕಿಯಾಗಿ ನಟಿಸಿರುವ, ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ “ರೇಮೊ” ನವೆಂಬರ್ 25 ರಂದು ಬಿಡುಗಡೆಯಾಗಲಿದೆ. ಸಿ.ಆರ್.ಗೋಪಿ ಈ ಚಿತ್ರದ ಸಹ ನಿರ್ಮಾಪಕರು.

ನಾನು ಮೊದಲ ಬಾರಿ ಇಶಾನ್ ಅವರನ್ನು ಭೇಟಿ ಮಾಡಿದ್ದು ದುಬೈನಲ್ಲಿ. ಇಷ್ಟು ಚೆನ್ನಾಗಿದ್ದಾರೆ. ಇವರನ್ನು ಹೀರೋ ಮಾಡಬೇಕು ಅಂದು ಕೊಂಡೆ. ನಂತರ “ರೇಮೊ” ಚಿತ್ರದ ಕಥೆ ಬರೆದೆ. 2019ರಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಯಿತು. ಆನಂತರ ಹೈದರಾಬಾದ್, ಜಮ್ಮು-ಕಾಶ್ಮೀರ, ಸೌತ್ ಆಫ್ರಿಕಾ, ಸಿಂಗಾಪುರ ಮುಂತಾದ ಕಡೆ ಚಿತ್ರೀಕರಣ ನಡೆಸಲಾಯಿತು.


ಇದೊಂದು ಮ್ಯೂಸಿಕಲ್ ಲವ್ ಸ್ಟೋರಿ. ಮ್ಯಾಜಿಕಲ್‌ ಕಂಪೋಸರ್ ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಅದ್ಭುತ ಹಾಡುಗಳು ಈ ಚಿತ್ರದಲ್ಲಿದೆ.
ಇಶಾನ್ – ಆಶಿಕಾ ರಂಗನಾಥ್ ಅವರ ಸುಂದರ ಜೋಡಿಯನ್ನು ತೆರೆ ಮೇಲೆ ನೋಡಿದವರು ಫಿದಾ ಆಗುವುದು ಖಂಡಿತಾ. ವೈದಿ ಅವರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ರೇಮೊ” ಚಿತ್ರದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು.


ಸದ್ಯದಲ್ಲೇ ಲಿರಿಕಲ್ ಸಾಂಗ್, ಒಂದು ವಿಡಿಯೋ ಸಾಂಗ್ ಮತ್ತು ಟ್ರೇಲರ್ ಬಿಡುಗಡೆ ಮಾಡುತ್ತೇವೆ.
“ರೇಮೊ” ಚಿತ್ರದಲ್ಲಿ ಪರಿಶುದ್ಧ ಪ್ರೇಮಕಥೆಯೊಂದಿಗೆ ಭಾವನಾತ್ಮಕ ಸನ್ನಿವೇಶಗಳು ನೋಡುಗರ ಮನಸ್ಸಿಗೆ ಹತ್ತಿರವಾಗಲಿದೆ.

ನವೆಂಬರ್ 25 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ತೆರೆಯ ಮೇಲೆ ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ನೀವೆಲ್ಲರು ನೋಡಿ ಹರಿಸಿ ಎನ್ನುತ್ತಾರೆ ನಿರ್ದೇಶಕ ಪವನ್ ಒಡೆಯರ್.

Related Posts

error: Content is protected !!