ಹರಿ-ಹರೀಶ್ ನಿರ್ದೇಶನದ ಸಮಂತಾ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರವಾದ ‘ಯಶೋದಾ’ ನ.11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರ ಕೆಲಸ ನೋಡಿ ಹಾಲಿವುಡ್ನ ಸಾಹಸ ನಿರ್ದೇಶಕ ಯಾನಿಕ್ ಬೆನ್ ಬೆರಗಾಗಿದ್ದಾರೆ.
ಶ್ರೀದೇವಿ ಮೂವೀಸ್ ಅಡಿಯಲ್ಲಿ ಶಿವಲೆಂಕ ಕೃಷ್ಣ ಪ್ರಸಾದ್ ನಿರ್ಮಿಸಿರುವ ಈ ಅದ್ಧೂರಿ ಬಜೆಟ್ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಅಷ್ಟೇ ಅಲ್ಲ, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ಒಂದು ಕಡೆ ಪ್ರೇಕ್ಷಕರು ಚಿತ್ರದಲ್ಲಿನ ಆಕ್ಷನ್ ದೃಶ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಚಿತ್ರದಲ್ಲಿ ಹೈ-ವೋಲ್ಟೇಜ್ ಫೈಟ್ಸ್ ಮತ್ತು ಸ್ಟಂಟ್‌ಗಳು ಚೆನ್ನಾಗಿ ಮೂಡಿ ಬರುವುದಕ್ಕೆ ಕಾರಣರಾಗಿರುವ ಸಮಂತಾ ಶ್ರದ್ಧೆಗೆ ಯಾನಿಕ್ ಬೆನ್ ಖುಷಿಯಾಗಿದ್ದಾರೆ.
ಸಮಂತಾ ಮತ್ತು ಬೆನ್ ಒಟ್ಟಿಗೆ ಕೆಲಸ ಮಾಡುತ್ತಿರುವುದು ಇದು ಮೊದಲೇನಲ್ಲ.
ಈ ಹಿಂದೆ ಸಮಂತಾ ಅವರೊಂದಿಗೆ ‘ಫ್ಯಾಮಿಲಿ ಮ್ಯಾನ್ 2’ ವೆಬ್‌ಸೀರೀಸ್‌ಗಾಗಿ ಕೆಲಸ ಮಾಡಿದರು ಮತ್ತು ಈಗ ಅವರು ‘ಯಶೋದಾ’ದಲ್ಲಿ ಅತ್ಯುತ್ತಮ ಆಕ್ಷನ್‌ಗಾಗಿ ಜೊತೆಯಾಗಿದ್ದಾರೆ. ಚಿತ್ರದಲ್ಲಿ ಆಕ್ಷನ್ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿರುವುದಕ್ಕೆ ಸಮಂತಾ ಅವರ ಸಮರ್ಪಣಾ ಮನೋಭಾವ ಮತ್ತು ಇಚ್ಛಾಶಕ್ತಿಯೇ ಕಾರಣ ಎಂದು ಮೆಚ್ಚಿ ಮಾತನಾಡಿದ್ದಾರೆ.
ಐಕಿಡೊ, ಕಿಕ್ ಬಾಕ್ಸಿಂಗ್, ಜಿಮ್ನಾಸ್ಟಿಕಗಸ್ ಮುಂತಾದ ಕಲೆಗಳಲ್ಲಿ ಪರಿಣಿತರಾಗಿರುವ ಬೆನ್, ಹಾಲಿವುಡ್ ‘ಟ್ರಾನ್ಸ್ಪೋರ್ಟರ್’, ‘ಇನ್ಸೆಪ್ಷನ್’, ಬಾಲಿವುಡ್ನ ‘ಟೈಗರ್ ಜಿಂದಾ ಹೈ’, ‘ರಯೀಸ್’, ತೆಲುಗಿನ ‘ಅತ್ತಾರಿಂಟಿಕಿ ದಾರೇದಿ’, ‘ನೇನೋಕ್ಕೊಡೇನ್’ ಮುಂತಾದ ಚಿತ್ರಗಳಿಗೆ ಸಾಹಸ ಸಂಯೋಜನೆ ಮಾಡಿದ್ದಾರೆ.
‘ಯಶೋದಾ’ ಚಿತ್ರದಲ್ಲಿ ಚಿತ್ರದಲ್ಲಿ ಸಮಂತಾ ಜೊತೆಗೆ ವರಲಕ್ಷ್ಮಿ ಶರತ್‌ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮಾ ಮುಂತಾದವರು ನಟಿಸಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಏಕಕಾಲಕ್ಕೆ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.