ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ ಕೆ.ಆರ್.ಮುರಳಿ (_63) ಕೃಷ್ಣ ನಿಧನರಾಗಿದ್ದಾರೆ

ಅವರು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದರು. ಆದರೆ, ಬ್ರೈನ್ ಟೂಮರ್ ಇರೋದು ತಡವಾಗಿ ಬೆಳಕಿಗೆ ಬಂದಿದೆ. ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಟ್ಯೂಮರ್ ಪತ್ತೆಯಾಗಿದೆ.

ಈ ಸಂಬಂಧ ಲಾಲ್ ಬಾಗ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದರೂ, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಇಬ್ಬರು ಹೆಣ್ಣು ಮಕ್ಕಳು ಹಾಗು ಪತ್ನಿಯನ್ನ ಅಗಲಿದ್ದಾರೆ.

ಅವರು, ಗರ ಸಿನಿಮಾಗಾಗಿ ಬಾಲಿವುಡ್ ನ ಜಾನಿ ಲಿವರ್’ ಅವರನ್ನು ಕನ್ನಡಕ್ಕೆ ಕರೆತಂದಿದ್ದರು.
ವೃತ್ತಿಯಲ್ಲಿ ವಕೀಲರಾದರೂ, ಸಿನಿಮಾನ ಅವರು ಪ್ರವೃತ್ತಿಯಾಗಿಸಿಕೊಂಡಿದ್ದರು.

ಸಹಕಾರ ನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ನಂತರ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ಅವರು ನಿರ್ಮಿಸಿದ್ದರು

Related Posts

error: Content is protected !!