ಮಾಂಕ್ ದಿ ಯಂಗ್ ಎಂಬ ವಿಂಟೇಜ್ ಫ್ಯಾಂಟಸಿ ಥ್ರಿಲ್ಲರ್ ಸಾಂಗ್ ರಿಲೀಸ್

ಹೊಸ ತಂಡದ ಹೊಸ ಪ್ರಯತ್ನ “ಮಾಂಕ್ ದಿ ಯಂಗ್”.
ಇತ್ತೀಚೆಗೆ ಈ ಚಿತ್ರದ ” ಕಣ್ ಗಳೆ ಸೋತು” ಎಂಬ ಹಾಡು ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಹಾಗೂ ಹಿರಿಯ ನಟ ಸುಂದರರಾಜ್ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಸುಪ್ರೀತ್ ಫಲ್ಗುಣ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಸುಮಧುರ ಕಂಠದ ಗಾಯಕಿ ಐಶ್ವರ್ಯ ರಂಗರಾಜನ್ ಇಂಪಾಗಿ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಹೊರಬಂದಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಮೆಚ್ಚುಗೆ ಪಡೆಯುತ್ತಿದೆ. ಅಶ್ವಿನ್ ಶಾನ್ ಭಾಗ್ ಈ ಹಾಡನ್ನು ಬರೆದಿದ್ದಾರೆ.

ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಅಶ್ವಿನ್ ಶಾನ್ ಭಾಗ್ ಬರೆದಿದ್ದಾರೆ. ಖ್ಯಾತ ಗಾಯಕಿಯರಾದ ಐಶ್ವರ್ಯ ರಂಗರಾಜನ್ ಹಾಗೂ ಸಾದ್ವಿನಿ ಕೊಪ್ಪ ಈ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಸುಪ್ರೀತ್ ಫಲ್ಗುಣ ಮಾಹಿತಿ ನೀಡಿದರು.

ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ, ಎಲ್ಲರ ಸಹಕಾರದಿಂದ ಚೆನ್ನಾಗಿ ಬಂದಿದೆ‌. ಹಾಡುಗಳಂತೂ ಅದ್ಭುತವಾಗಿದೆ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ.

ನಾಯಕ ಸರೋವರ್, ನಾಯಕಿ ಸೌಂದರ್ಯ ಗೌಡ, ನಟಿ ಉಷಾ ಭಂಡಾರಿ, ನಟ ಶಿವಪ್ಪ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ನಿವೃತ್ತ ಆರ್ಮಿ ಆಫೀಸರ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್, ಲಾಲ್ ಚಂದ್ ಖತಾರ್ ಐದು ಜನ ಸೇರಿ “ಮಾಂಕ್ ದಿ ಯಂಗ್” ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಐದು ಜನ ನಿರ್ಮಾಪಕರು ಮಾತನಾಡಿ, ತಮ್ಮ ನೂತನ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.

ಛಾಯಾಗ್ರಾಹಕ ಕಾರ್ತಿಕ್ ಶರ್ಮ, ನೃತ್ಯ ನಿರ್ದೇಶಕ ಹರ್ಷವರ್ಧನ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಾಡಿನ ಪ್ರಸಿದ್ದ ನೃತ್ಯಗಾರರು ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು.

Related Posts

error: Content is protected !!