ಹೊಸ ಸಿನಿಮಾ ಒಪ್ಪಿದ ಶಿವಣ್ಣ: ಇದು ನಿತಿನ್ ಶಿವಾರ್ಜುನ ಚಿತ್ರ…

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ವೇದ” ಚಿತ್ರ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸ ಚಿತ್ರದ ಬಗ್ಗೆ ಮಾಹಿತಿ ಬಂದಿದೆ.

ನಿಶ್ಚಿತ ಕಂಬೈನ್ಸ್ ಬ್ಯಾನರ್ ನಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ ಈ ನೂತನ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ನಿತಿನ್ ಶಿವಾರ್ಜುನ್ ಈ ಚಿತ್ರದ ಸಹ ನಿರ್ಮಾಪಕರು. ಈ ಸಂಸ್ಥೆಯಿಂದ ಹಿಂದೆ “ಶಿವಾರ್ಜುನ” ಚಿತ್ರ ನಿರ್ಮಾಣವಾಗಿತ್ತು.

ಕನ್ನಡದ ರಿಯಾಲಿಟಿ ಶೋ “ಮಜಾ ಟಾಕೀಸ್” ಹಾಗೂ ಸೃಜನ್ ಲೋಕೇಶ್ ಅಭಿನಯದ “ಎಲ್ಲಿದೆ ಇಲ್ಲಿತನಕ” ಚಿತ್ರದ ನಿರ್ದೇಶಕ ತೇಜಸ್ವಿ ಕೆ ನಾಗ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌

ಶಿವಣ್ಣ ಈ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜಕುಮಾರ್ ಅವರು ಈ ತನಕ ಮಾಡದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿರ್ದೇಶಕ ತೇಜಸ್ವಿ ಕೆ ನಾಗ್ ತಿಳಿಸಿದ್ದಾರೆ.

Related Posts

error: Content is protected !!