ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಉತ್ತಮ ಕಂಟೆಂಟ್ ವುಳ್ಳ “ಜೂಲಿಯೆಟ್ 2” ಚಿತ್ರ ಸಹ ಫೆಬ್ರವರಿ 24ರಂದು ಬಿಡುಗಡೆಯಾಗುತ್ತಿದೆ. ಬೃಂದಾ ಆಚಾರ್ಯ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
“ಜೂಲಿಯೆಟ್ 2” ಮಹಿಳಾ ಪ್ರಧಾನ ಚಿತ್ರ. ತೊಂದರೆಗೆ ಸಿಲುಕಿದ ಹೆಣ್ಣು ಮಗಳೊಬ್ಬಳು ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾಳೆ ಎಂಬುದು ಕಥೆ. ಸಾಮಾನ್ಯವಾಗಿ “ಜೂಲಿಯೆಟ್” ಎಂದಾಕ್ಷಣ ಪ್ರೇಮಕಥೆ ಅಂದುಕೊಳ್ಳುವುದು ವಾಡಿಕೆ. ಆದರೆ ಇದು ಲವ್ ಸ್ಟೋರಿ ಅಲ್ಲ. ಇಲ್ಲಿ ರೋಮಿಯೋ ಇರುವುದಿಲ್ಲ.
ಇಲ್ಲಿ ತಪ್ಪು ಮಾಡಿದವರಿಗೆ ಇಲ್ಲೇ ಶಿಕ್ಷೆ. ಎಂಬುದನ್ನು ಸಿನಿಮಾ ಮೂಲಕ ಹೇಳ ಹೊರಟ್ಟಿದ್ದೇವೆ. ಹಾಡುಗಳು ಹಾಗೂ ಟ್ರೇಲರ್ ಮೂಲಕ ನಮ್ಮ ಚಿತ್ರ ಜನರ ಮನ ತಲುಪಿದೆ. ಅಪ್ಪ – ಮಗಳ ಬಾಂಧವ್ಯದ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ಬೆಳ್ತಂಗಡಿ ಬಳಿಯ ಪಶ್ಚಿಮಘಟ್ಟದ ಕಾಡೊಂದರಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ ಇದು ನನ್ನ ಪ್ರಥಮ ಚಿತ್ರ. ನೋಡಿ ಹಾರೈಸಿ ಎಂದರು ನಿರ್ದೇಶಕ ವಿರಾಟ್ ಬಿ ಗೌಡ.
ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಇದೊಂದು ವಿಭಿನ್ನ ಕಥೆ. ಮಹಿಳೆ ಅಬಲೆಯಲ್ಲ. ಸಬಲೆ. ಎಂದು ನಿರ್ದೇಶಕರು ಹೇಳ ಹೊರಟ್ಟಿದ್ದಾರೆ. ತಂದೆ – ಮಗಳ ಬಾಂಧವ್ಯದ ಸನ್ನಿವೇಶಗಳು ಮನ ಮಿಡಿಯುತ್ತದೆ. ಕಾಡಿನಲ್ಲಿ ನಡೆದ ಚಿತ್ರೀಕರಣದ ಅನುಭವ ಮರೆಯಲು ಅಸಾಧ್ಯ. ಎಲ್ಲರೂ ಕಷ್ಟಪಟ್ಟು ಚಿತ್ರ ಮಾಡಿದ್ದೇವೆ ಎಂದು ಲ ಬೃಂದಾ ಆಚಾರ್ಯ ಹೇಳುತ್ತಾರೆ.
ಶ್ರೀಕಾಂತ್ ಹಾಗೂ ರಾಯ್ ಅವರು ತಮ್ಮ ಪಾತ್ರದ ಅನುಭವ ಹಂಚಿಕೊಂಡರು.
ಲಿಖಿತ್ ಆರ್ ಕೋಟ್ಯಾನ್ ನಿರ್ಮಿಸಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಅವರ ಬಿ.ಜಿ.ಎಂ ಹಾಗೂ shanto v anto ಅವರ ಛಾಯಾಗ್ರಹಣವಿದೆ.
ಬೃಂದಾ ಆಚಾರ್ಯ, ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ, ರಾಧೇಶ್ ಶೆಣೈ, ಶ್ರೀಕಾಂತ್, ರಾಯ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.