ಮಧ್ಯಪ್ರದೇಶ ಕಡೆಗೆ ಮೈ ಹೀರೋ ಪಯಣ…

ಎ.ವಿ .ಸ್ಟುಡಿಯೋಸ್ ಬ್ಯಾನರ್ ನಲ್ನಿಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಹತ್ತುದಿನಗಳ ಚಿತ್ರೀಕರಣ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ ಹಾಗು


ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಈ ತಿಂಗಳ ಕೊನೆಗೆ ದ್ವಿತೀಯ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ಆರಂಭವಾಗಲಿದೆ.

ವಿಶ್ವದಾದ್ಯಂತ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಕೇಂದ್ರವಾಗಿಟ್ಟುಕೊಂಡು ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯ ಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

ಅಮೇರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತದ ಹುಡುಗನೊಬ್ಬನನ್ನು ಭೇಟಿಯಾಗುತ್ತಾರೆ‌‌. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ ಮೂರ್ತಿ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಮತ್ತು ಜಿಮ್ ಶಿವು ಸಂಭಾಷಣೆ ಬರೆಯುತ್ತಿದ್ದಾರೆ.

Related Posts

error: Content is protected !!