ಇಂಗ್ಲೀಷ್ ಆಲ್ಬಂಗೆ ಕನ್ನಡ ಹುಡುಗಿಯ ಸ್ಪರ್ಶ: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಇತಿ ಆಚಾರ್ಯ…

‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮೆರ್ಲಿನ್ ಬಾಬಾಜಿ ಅಮೇರಿಕದಲ್ಲಿ ಖ್ಯಾತಿ ಗಳಿಸಿರುವ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ. ಕಳೆದ ವರ್ಷ ಇವರ ‘ವೈಬ್ಸ್’ ಸಾಂಗ್ ಬಿಡುಗಡೆಯಾಗಿ ಪ್ರಪಂಚದಾದ್ಯಂತ ಜನಪ್ರಿಯ ಗೊಂಡಿತ್ತು. ಸೋಶಿಯಲ್ ಮೀಡಿಯಾ ಸೆನ್ಸೇಶನ್ ಆಗಿದ್ದ ‘ವೈಬ್ಸ್’ ಸಾಂಗ್ ಹತ್ತು ಮಿಲಿಯನ್ ವೀವ್ಸ್ ಪಡೆದುಕೊಂಡಿತ್ತು. ಇದೀಗ ಮತ್ತೊಂದು ವೀಡಿಯೋ ಸಾಂಗ್ ಮೂಲಕ ಮೆರ್ಲಿನ್ ಸೆನ್ಸೇಶನ್ ಕ್ರಿಯೇಟ್ ಮಾಡಲು ಸಜ್ಜಾಗಿದ್ದಾರೆ. ತಮ್ಮ ಹೊಸ ವೀಡಿಯೋ ಹಾಡಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿರುವ ನಟಿ ಹಾಗೂ ಮಾಡೆಲ್ ಇತಿ ಆಚಾರ್ಯ ಅವರ ಜೊತೆ ಕೈ ಜೋಡಿಸಿರೋದು ವಿಶೇಷ.

ಮೆರ್ಲಿನ್ ಬಾಬಾಜಿ ಕಳೆದ ಒಂದು ವರ್ಷದಿಂದ ನನಗೆ ಪರಿಚಿತರು. ಅವರ ಸಂಗೀತದ ದೊಡ್ಡ ಅಭಿಮಾನಿ ನಾನು. ‘ಲವ್ ಹರ್ ಟೂ ಮಚ್’ ಸಾಂಗ್ ಕೇಳಿದ ಮೇಲೆ ತುಂಬಾ ಇಷ್ಟವಾಯ್ತು. ನಾನು ಈ ಹಾಡಿನಲ್ಲಿ ನಟಿಸುವೆ ಎಂದು ಹೇಳಿದೆ ಎಂದು ಇತಿ ಆಚಾರ್ಯ ಸಂತಸ ಹಂಚಿಕೊಂಡಿದ್ದಾರೆ.

ಇತಿ ಆಚಾರ್ಯ ಸಹೋದರ ಅಭಿ ಆಚಾರ್ಯ ಕೂಡ ಅಮೇರಿಕಾದಲ್ಲಿ ಸಂಗೀತ ಕಲಾವಿದರಾಗಿದ್ದು, 2023ರ ಗ್ರ್ಯಾಮ್ಮಿ ಅವಾರ್ಡ್ ನಲ್ಲಿ ಇವರ ಹೆಸರು ನಾಮ ನಿರ್ದೇಶನವಾಗಿತ್ತು. ಅಮೇರಿಕಾದಲ್ಲಿ ನನ್ನ ಸಹೋದರ ನೆಲೆಸಿರೋದು ಅಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗಿದೆ ಎನ್ನುತ್ತಾರೆ ಇತಿ ಆಚಾರ್ಯ.

ನಟಿ ಹಾಗೂ ಮಾಡೆಲ್ ಆಗಿರುವ ಇತಿ ಆಚಾರ್ಯ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಒಳಗೊಂಡಂತೆ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಹಿರಿಮೆ ಇವರದ್ದು, 2022ರ ಕ್ಯಾನಿಸ್ ಫಿಲ್ಮಂ ಫೆಸ್ಟ್ ರೆಡ್ ಕಾರ್ಪೆಟ್ ನಲ್ಲೂ ಇತಿ ಹೆಜ್ಜೆ ಹಾಕಿದ್ದಾರೆ. ಇದೀಗ ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದ್ದಾರೆ.

Related Posts

error: Content is protected !!