ತಿಲಕ್ ಈಗ ಫ್ರಾಂಕ್ ಸ್ಟಾರ್! ಸದ್ದಿಲ್ಲದೆ ಶೂಟಿಂಗ್ ಮುಕ್ತಾಯ

ವುಡ್ ಕ್ರೀಪರ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) “ಗ್ಯಾಂಗ್ ಸ್ಟರ್” ಆಗಿ ಹಾಗೂ ಗಿರೀಶ್ ಕುಮಾರ್ ಬಿ “ಫ್ರಾಂಕ್ ಸ್ಟರ್” ಆಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮುಖ್ಯಪಾತ್ರದಲ್ಲಿ ನಟಿಸಿರುವ ಗಿರೀಶ್ ಕುಮಾರ್ ಬಿ. ಈ ಚಿತ್ರದ ನಿರ್ದೇಶಕರು ಹೌದು‌‌‌. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ.

ಕಾಮಿಡಿ – ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗಿರೀಶ್ ಕುಮಾರ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ “ಭಾವಚಿತ್ರ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಅವರಿಗೆ ಇದು ಮೂರನೇ ಚಿತ್ರ.

ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಖ್ಯಾತ ಆನಂದ್ ಆಡಿಯೋ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಲಿದೆ. ಅಜಯ್ ಕುಮಾರ್ ಛಾಯಾಗ್ರಹಣ, ರತೀಶ್ ಕುಮಾರ್ ಸಂಕಲನ ಹಾಗೂ ಗಿರೀಶ್ ಬಿಜ್ಜಳ್ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ.

ತಿಲಕ್ , ಗಿರೀಶ್ ಕುಮಾರ್, ವಿರಾಣಿಕ ಶೆಟ್ಟಿ, ಬಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related Posts

error: Content is protected !!