ನಾಯಕ ಕಮ್ ನಿರ್ದೇಶಕ ಹೇಮಂತ್ ಕುಮಾರ್ ಅವರು ರಿಚ್ಚಿ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ‘ಕಳೆದು ಹೋಗಿರುವೆ’ ಹಾಡು ಮೇ 18 ರಂದು ಬಿಡುಗಡೆಯಾಗಲಿದೆ. ಗೀತ ಸಾಹಿತಿ ಗೌಸ್ ಫೀರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ.
ಬಹಳ ವರ್ಷಗಳ ನಂತರ ಕುನಾಲ್ ಅವರು ಹಾಡಿರುವ ಕನ್ನಡ ಚಿತ್ರಗೀತೆಯಿದು. ಅಗಸ್ತ್ಯ ಸಂತೋಷ್ ಸಂಗೀತ ನೀಡಿರುವ ಈ ಹಾಡಿಗೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ರಿಚ್ಚಿ ಹಾಗೂ ರಮೋಲಾ ಹೆಜ್ಜೆ ಹಾಕಿದ್ದಾರೆ.
” ರಿಚ್ಚಿ” ಲವ್ ಕಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಚಿತ್ರದ ಹಾಡುಗಳಿಗೂ ಹೆಚ್ಚಿನ ಮಹತ್ವ ನೀಡಲಾಗಿದ್ದು, ಅಗಸ್ತ್ಯ ಸಂತೋಷ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಉತ್ತಮವಾಗಿ ಮೂಡಿಬಂದಿದೆ.
ಚಿತ್ರದ ಮೊದಲ ಹಾಡು ಮೇ ಹದಿನೆಂಟರಂದು ಬಿಡುಗಡೆಯಾಗಲಿದ್ದು, ಜೂನ್ ಅಥವಾ ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ರಿಚ್ಚಿ ತಿಳಿಸಿದ್ದಾರೆ.