ಜೆ ಕೆ ಅಭಿನಯದ ಐರಾವನ್ ರಿಲೀಸ್ ಗೆ ರೆಡಿ: ಜೂನ್ 16ಕ್ಕೆ ಆಟ ಶುರು

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟ ಜೆ‌.ಕೆ ನಾಯಕರಾಗಿ ನಟಿಸಿರುವ “ಐರಾವನ್” ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಾನು ಮೂಲತಃ ವೈದ್ಯ. ಕೋವಿಡ್ ಸಮಯದಲ್ಲಿ ನಿರ್ದೇಶಕ ರಾಮ್ಸ್ ರಂಗ ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಆ ಸಮಯದಲ್ಲಿ ಚಿತ್ರರಂಗದ ಬಹುತೇಕರು ಸಂಕಷ್ಟದಲ್ಲಿದ್ದರು.
ಈ ಸಂದರ್ಭದಲ್ಲಿ ನಾನು ಸಿನಿಮಾ ನಿರ್ಮಾಣ ಮಾಡಿದರೆ ಅನೇಕ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶ ನನ್ನದಾಗಿತ್ತು. ಈಗ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದೇ ಜೂನ್ 16 ರಂದು ಬಿಡುಗಡೆಯಾಗುತ್ತಿದೆ. ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಡಾ.ನಿರಂತರ ಗಣೇಶ್.

“ಐರಾವನ್” ಎಂದರೆ ಮಹಾಭಾರತದಲ್ಲಿ ಬರುವ ಪಾತ್ರವೊಂದರ ಹೆಸರು. ಇದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ‌. ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಸಮುದ್ರದಲ್ಲಿ ಹೆಚ್ಚಿನ ಚಿತ್ರೀಕರಣ ಮಾಡಿರುವುದು ಚಿತ್ರದ ವಿಶೇಷ ಎಂದು ನಿರ್ದೇಶಕ ರಾಮ್ಸ್ ರಂಗ ತಿಳಿಸಿದರು.

“ಐರಾವನ್” ಚಿತ್ರದ ಟೀಸರ್ ಗೆ ತಮ್ಮಿಂದ ಸಿಕ್ಕಿರುವ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ಕೆಲವರಿಗೆ ಈ ಚಿತ್ರದ ಬಗ್ಗೆ ಗೊಂದಲವಿತ್ತು. ಇದು ಹಿಂದಿ ಚಿತ್ರದ ಡಬ್ ಇರಬಹುದು ಎಂದು. ಆದರೆ ಇದು ಪಕ್ಕಾ ಕನ್ನಡ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ನಿರ್ಮಾಪಕ ಡಾ. ನಿರಂತರ ಗಣೇಶ್ ಯಾವುದೇ ಕೊರತೆ ಬಾರದಂತೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಜೂನ್ 16 ಚಿತ್ರ ತೆರೆಗೆ ಬರುತ್ತಿದೆ ಎಂದು ನಾಯಕ ಜೆ.ಕೆ ತಿಳಿಸಿದರು.

ತಮ್ಮ ಪಾತ್ರದ ಬಗ್ಗೆ ನಾಯಕಿ ಅದ್ವಿತಿ ಶೆಟ್ಟಿ, ಹಾಗೂ ನವ ನಟ ವಿವೇಕ್, ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ದೇವೇಂದ್ರ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಸಂತೋಷ್ ಉಪಸ್ಥಿತರಿದ್ದರು.

Related Posts

error: Content is protected !!