ಬೆಂಗಳೂರು ಬಾಯ್ಸ್ ಟ್ರೇಲರ್ ಕೊಡ್ತು ಕಿಕ್: 4 ಐಕಾನಿಕ್ ಕ್ಯಾರೆಕ್ಟರ್ ಝಲಕ್ ಮಿಸ್ ಮಾಡ್ಕೋಬೇಡಿ!

ವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. 2.55 ನಿಮಿಷವಿರುವ ಟ್ರೇಲರ್ ಫನ್-ಎಮೋಷನ್, ಸೆಂಟಿಮೆಂಟ್, ರೋಮ್ಯಾನ್ಸ್, ಮೋಜು-ಮಸ್ತಿ, ಪಂಚಿಂಗ್ ಡೈಲಾಗ್ ಕಿಕ್ ಗಳಿಂದ ಕೂಡಿದೆ. ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್.

90ರ ದಶಕದಲ್ಲಿ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್, ರೋಹಿತ್ ಮಿಂಚಿದ್ದಾರೆ. ಇವರಿಗೆ ಜೋಡಿಯಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ. ಕಾಮಿಡಿ ಕಿಂಗ್ ಚಿಕ್ಕಣ ಪ್ರಮುಖ ಪಾತ್ರವೊಂದ್ರಲ್ಲಿ ನಟಿಸಿದ್ದು, ಐಟಿಬಿಟಿ ಉದ್ಯೋಗಿ ಕಾಣಿಸಿಕೊಂಡಿದ್ದಾರೆ.

ಜೊತೆಗೆ ಅರಸು ಸಾಹಿತ್ಯದ ಹಾಡಿಗೆ ಕಂಠ ಕೂಡ ಕುಣಿಸಿದ್ದಾರೆ. ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಶೂಟಿಂಗ್ ಮುಗಿಸಿ ಬಿಡುಗಡೆ ರೆಡಿಯಾಗಿರೋ ಬೆಂಗಳೂರು ಬಾಯ್ಸ್ ಸಿನಿಮಾಗೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ ಕ್ರಿಯೇಟಿವ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದು, ರವಿ ಶ್ರೀರಾಮ್ ಕೋ ಡೈರೆಕ್ಟರ್ ಆಗಿ ದುಡಿದಿದ್ದಾರೆ.

ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಟ್ಯೂನ್ ಹಾಕಿದ್ದಾರೆ. ಸಿನಿಮಾ ಆಸಕ್ತಿ ಹೊಂದಿರುವ ತೆಲುಗು ಮೂಲದ ವಿಕ್ರಮ್‌ ಕೆ.ವೈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸದ್ಯ ಟ್ರೇಲರ್ ಮೂಲಕ ಕಿಕ್ ಕೊಟ್ಟಿರುವ ಬೆಂಗಳೂರು ಬಾಯ್ಸ್ ಆದಷ್ಟು ಬೆಳ್ಳಿತೆರೆಮೇಲೆ ಅಬ್ಬರಿಸಲಿದೆ.

Related Posts

error: Content is protected !!