ಮೈ ನೇಮ್ ಈಸ್ ಶೀಲ! ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಾಗಿಣಿ

ರಾಗಿಣಿ ಕನ್ನಡ ಹಾಗೂ ಮಲೆಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ‌ಯಾಗಿದೆ. ರಾಗಿಣಿ ಇಲ್ಲಿ ವಿಶೇಷ ಪಾತ್ರದ ಮೂಲಕ ಗಮನ ಸೆಳೆಯಲಿದ್ದಾರೆ.

ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ “ಶೀಲ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

“ಶೀಲ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣು ಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌.

ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ ನಿರ್ದೇಶಿಸಿದ್ದಾರೆ.

ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related Posts

error: Content is protected !!