ನಕುಲ್ ಗೌಡನ ‘ಬ್ಯಾಡ್’ ಬಾಯ್ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

“ರೋಮಿಯೋ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿರುವ ಪಿ.ಸಿ ಶೇಖರ್ ನಿರ್ದೇಶನದಲ್ಲಿ ನಕುಲ್ ಗೌಡ(ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ “BAD”. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರ ಕನ್ನಡದಲ್ಲಿ ವಿಭಿನ್ನ ಪ್ರಯತ್ನ ಎನ್ನಬಹುದು.

ಈ ಚಿತ್ರಕ್ಕೆ ” BAD” ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೆ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. “ರೋಷಮಾನ್ ಎಫೆಕ್ಟ್” ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ‌. ಜಪಾನ್ ನಿರ್ದೇಶರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಎನ್ನಬಹುದು. ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ.

ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಭತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ. ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ “ರಾಗ ಹಾಗೂ “ದಿ ಟೆರರಿಸ್ಟ್” ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ.
ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರೆ ಅಭಿನಯಿಸುತ್ತಿದ್ದಾರೆ.


“ಪ್ರೀತಿಯ ರಾಯಭಾರಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಶಕ್ತಿ ಶೇಖರ್ ಈ ಚಿತ್ರದ ಛಾಯಾಗ್ರಾಹಕರು ಎಂದು ನಿರ್ದೇಶಕ ಪಿ.ಸಿ.ಶೇಖರ್ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

Related Posts

error: Content is protected !!