ಪ್ರಜ್ವಲ್ ಹುಟ್ಟು ಹಬ್ಬಕ್ಕೆ ಮಾಫಿಯಾ ಪೋಸ್ಟರ್ ಬಂತು

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಸಿನಿಮಾ “ಮಾಫಿಯಾ”.
ಜುಲೈ 4 ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್ ಅವರಿಗೆ “ಮಾಫಿಯಾ” ಚಿತ್ರತಂಡ ಶುಭಾಶಯ ಕೋರಿದೆ.

ಚಿತ್ರೀಕರಣ ಮುಕ್ತಾಯವಾಗಿ, ಪೋಸ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿರುವ ಈ ಚಿತ್ರವನ್ನು ಆಗಸ್ಟ್ ನಲ್ಲಿ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ. “ಮಾಫಿಯಾ” ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ‌. ಇದು ಅವರ ನಟನೆಯ ಮೂವತ್ತೈದನೇ ಚಿತ್ರವೂ ಹೌದು.

ಈ ಚಿತ್ರದಲ್ಲಿ ಮೂರು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Related Posts

error: Content is protected !!