ದೇವರ ಕನಸಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಕ್ಷಿ: ಸಿನಿಮಾ ಟ್ರೇಲರ್ ಹೊರಬಂತು

ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಮಕ್ಕಳದೇವರ ಕನಸು ಚಿತ್ರ ಜುಲೈ 21 ರಂದು ತೆರೆಗೆ ಬರುತ್ತಿದೆ.

ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ ಅಶ್ವಿನಿ ಪುನೀತ್ ರಾಜಕುಮಾರ್ ಅವರು ರಿಲೀಸ್ ಬಮಾಡಿ ಶುಭ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರದ ಮೂರು ಹಾಡುಗಳನ್ನು ಪ್ರದರ್ಶಿಸಲಾಯಿತು. ಪಿ.ಆರ್.ಕೆ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ನಾನು ನ್ಯೂಯಾರ್ಕ್ ಫಿಲಂ ಅಕಾಡಮಿಯಲ್ಲಿ ಅಧ್ಯಯನ ‌ಮಾಡಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಸುರೇಶ್ ಲಕ್ಕೂರ್, “ದೇವರ ಕನಸು” ನನ್ನ ನಿರ್ದೇಶನದ ಮೊದಲ ಚಿತ್ರ. ಈ ಮಕ್ಕಳ ಚಿತ್ರ ಈಗಾಗಲೇ ಪ್ರತಿಷ್ಠಿತ ಕಾನ್ಸ್ ಫಿಲಂ ಫೆಸ್ಟಿವಲ್ ಸೇರಿದಂತೆ ಅನೇಕ ಫಿಲಂ ಫೆಸ್ಟಿವಲ್ ಗಳಲ್ಲಿ ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ.

“ದೇವ” ಎನ್ನುವುದು ಈ ಚಿತ್ರದ ಮುಖ್ಯ ಪಾತ್ರಧಾರಿಯ ಹೆಸರು. ಈ ಪಾತ್ರದಲ್ಲಿ ಮಾಸ್ಟರ್ ದೀಪಕ್ ಅಭಿನಯಿಸಿದ್ದಾರೆ. ಈ ಹುಡುಗ ಕಾಣುವ ಕನಸು ಈಡೇರುವುದೊ ಅಥವಾ ಇಲ್ಲವೋ? ಎಂಬುದು ಕಥಾಹಂದರ. ‌ದೀಪಕ್, ಅಮೂಲ್ಯ, ಅಋಷಿ ವೇದಿಕ ಹಾಗೂ ಮಾಕ್ ಮಣಿ ಚಿತ್ರದ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ. ಜುಲೈ 21 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು.

ನಿರ್ಮಾಪಕರಾದ ಜಯ್ ಕುಮಾರ್, ಶೇಖರ್, ಕಥೆ ಬರೆದಿರುವ ಸುನೀಲ್ ರಾಮ್, ಹಾಡುಗಳು ಹಾಗೂ ಸಂಭಾಷಣೆ ರಚಿಸಿರುವ ಲಿಂಗರಾಜ್ ಇತಿಹಾಸ, ಸಂಗೀತ ನಿರ್ದೇಶಕ ಸ್ಯಾಂಡಿ ಹಾಗೂ ಚಿತ್ರದಲ್ಲಿ ನಟಿಸಿರುವ ಮಾಸ್ಟರ್ ದೀಪಕ್, ಬೇಬಿ ಅಮೂಲ್ಯ, ಅಋಷಿ ವೇದಿಕ, ಮಾಕ್ ಮಣಿ ಮುಂತಾದವರು ಮಾತನಾಡಿದರು.

.

Related Posts

error: Content is protected !!