ಜಂಟಲ್ ಮ್ಯಾನ್ 2 ಸಿನಿಮಾಗೆ ಚಾಲನೆ: ಸಂಗೀತ ಸಂಯೋಜನೆ ಶುರು

ಈ ಹಿಂದೆ ‘ಜಂಟಲ್ ಮ್ಯಾನ್’, ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ.

ಈ ಚಿತ್ರದ ಮುಹೂರ್ತ ಸದ್ಯದಲ್ಲೇ ನಡೆಯಲಿದ್ದು, ಅದಕ್ಕೂ ಮುನ್ನ, ಸಂಗೀತ ಸಂಯೋಜನೆಯ ಕೆಲಸಗಳು ಪ್ರಾರಂಭವಾಗಿವೆ.
RRR ಚಿತ್ರದ ‘ನಾಟ್ಟು ನಾಟ್ಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ, ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಕೀರವಾಣಿ ಸಂಗೀತಕ್ಕೆ ಖ್ಯಾತ ಗೀತರಚನೆಕಾರ ವೈರಮುತ್ತು ಸಾಹಿತ್ಯ ರಚಿಸುತ್ತಿದ್ದಾರೆ. ಈಗಾಗಲೇ ಸೋಮವಾರದಿಂದ ಕೇರಳದ ಬೋಲ್ ಗಟ್ಟಿ ಪ್ಯಾಲೇಸ್ ಐಲೆಂಡ್‌ನಲ್ಲಿ ಟ್ಯೂನ್ ಹಾಕುವ ಕೆಲಸ ಪ್ರಾರಂಭವಾಗಿದೆ. ಈ ಸೆಷನ್ನಲ್ಲಿ ಕೀರವಾಣಿ, ವೈರಮುತ್ತು, ಕುಂಜುಮೋನ್, ಗೋಕುಲ್ ಕೃಷ್ಣ ಮುಂತಾದವರು ಭಾಗವಹಿಸಿದ್ದಾರೆ.


‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಎ. ಗೋಕುಲ್ ಕೃಷ್ಣ ಕಥೆ-ಚಿತ್ರಕಥೆ ರಚಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಹೊರಬೀಳಲಿದೆ.

Related Posts

error: Content is protected !!