ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೆ ಎಂ ಎಫ್) ಉತ್ಪನ್ನಗಳಿಗೆ ಯಾವುದೇ ಸಂಭಾವನೆ ಪಡೆಯದೇ ‘ನಟಸಾರ್ವಭೌಮ’ ಡಾ ರಾಜ್‌ಕುಮಾರ್ ಅವರು ರಾಯಭಾರಿಯಾಗಿದ್ದರು. ಅವರ ಬಳಿಕ ನಟ ಪುನೀತ್ ರಾಜ್‌ಕುಮಾರ್ ಕೂಡ ಅಣ್ಣಾವ್ರ ಹಾದಿ ತುಳಿದಿದ್ದರು. ಈಗ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಕೆಎಂಎಫ್ ಉತ್ಪನ್ನಗಳಿಗೆ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಯಾವುದೇ ರೀತಿಯ ಸಂಭಾವನೆ ಪಡೆಯದೆ ಅವರು ರಾಯಭರಿಯಾಗಿದ್ದಾರೆ.
ಆ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ, ಶುಭಕೋರಿದ್ದಾರೆ.