‘ ದಿಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾಗಿರುವ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ.
ಸ್ವಾತಂತ್ರ್ಯ ದಿನದ ಅಂಗವಾಗಿ ರಿಲೀಸ್ ಆಗಿದ್ದ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್ ಗಾಗಿ ಪಟ್ಟ ಶ್ರಮವನ್ನು ಟೀಸರ್ ನಲ್ಲಿ ಕಟ್ಟಿಕೊಡಲಾಗಿದೆ.
ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಾಶ್ಮೀರಿ ಫೈಲ್ಸ್ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.
ಸೆಪ್ಟಂಬರ್ 28ರಂದೇ ‘ದಿ ವ್ಯಾಕ್ಸಿನ್ ವಾರ್’ ಚಿತ್ರ 11 ಭಾಷೆಯಲ್ಲಿ ತೆರೆ ಕಾಣಲಿದೆ. ಇದೇ ದಿನ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬೋದ ಸಲಾರ್ ಸಿನಿಮಾ ಕೂಡ ಬಿಡುಗಡೆಯಾಗಲಿದೆ.