ಕನ್ನಡಚಿತ್ರರಂಗದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.
ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಸೆಕೆಂಡ್ ಹಾಫ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾದ ಬರಹಗಾರರಾಗಿ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಗುರುಪ್ರಸಾದ್ ಚಂದ್ರಶೇಖರ್ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ವರಮಹಾಲಕ್ಷ್ಮೀ ಹಬ್ಬಕ್ಕೆ ಅನಾವರಣಗೊಂಡಿದೆ.
ಸೋಷಿಯೋ ಪೊಲಿಟಿಕಲ್ ಲಿಗ್ವಿಸ್ಟಿಕ್ ಡ್ರಾಮಾ ಕಥಾಹಂದರ ಹೊಂದಿರುವ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಸಿನಿಮಾ ಶೂಟಿಂಗ್ ಹಂತದಲ್ಲಿದ್ದು, ಕವಿರತ್ನ ವಿ.ನಾಗೇಂದ್ರ ಪ್ರಸಾದ್, ಬಾಲ ರಾಜವಾಡಿ, ವೈಜನಾಥ್ ಬಿರಾದಾರ್, ಅಶ್ವಿತಾ ಹೆಗ್ಡೆ, ಡಿಂಪನ ಜೀವನ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಭಾಷೆ ವಿಚಾರದ ಸುತ್ತ ಸಾಗುವ ಈ ಚಿತ್ರಕ್ಕೆ ಬಿ.ಶಿವಶಂಕರ್, ದತ್ತಾತ್ರೇಯ ವಿ ಜಮಾದಾರ್ ಬಂಡವಾಳ ಹೂಡಿದ್ದಾರೆ. ಶಿವಶಂಕರ್ ನೂರಬಂಡ ಛಾಯಾಗ್ರಹಣ, ಚರಣ್ ಅರ್ಜುನ್ ಸಂಗೀತ, ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಮಧು ತುಂಬಕೆರೆ ಸಂಕಲನ ಚಿತ್ರಕ್ಕಿದೆ.
ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಸಿನಿಮಾ ಕನ್ನಡದ ಜೊತೆಗೆ ತೆಲುಗು ಭಾಷೆಯಲ್ಲಿಯೂ ತಯಾರಾಗುತ್ತಿದೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿಯೂ ಹೊಸ ಪೋಸ್ಟರ್ ಹಬ್ಬದ ವಿಶೇಷವಾಗಿ ರಿಲೀಸ್ ಆಗಿದೆ.