ಟ್ರೆಂಡ್ ಆಗೋಕೆ ಏನ್ ಮಾಡ್ಬೇಕು ಗೊತ್ತಾ? ಸೂತ್ರಧಾರಿಯ ಹೊಸ ಸೂತ್ರವಿದು…

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ “ಸೂತ್ರಧಾರಿ” ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ “ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು” ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ‌. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ “ಡ್ಯಾಶ್” ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ ಎಂದು ನಿರ್ಮಾಪಕ ನವರಸನ್ ತಿಳಿಸಿದರು‌.

“ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ “ಏನ್ ಮಾಡ್ಬೇಕು” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎನ್ನುತ್ತಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.

“ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ “ಸೂತ್ರಧಾರಿ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

Related Posts

error: Content is protected !!