ಅವರಿಬ್ಬರಿಗೂ ಸಖತ್ ಖುಷಿ ! ವಿಜಯ್ ದೇವರಕೊಂಡ ಸಮಂತಾ ನಟನೆಯ ಖುಷಿಗೆ ದಿನಗಣನೆ: ಸೆಪ್ಟೆಂಬರ್ 1ಕ್ಕೆ ರಿಲೀಸ್

ಸಮಂತಾ ಹಾಗೂ ವಿಜಯ್ ದೇವರಕೊಂಡ ನಟನೆಯ ಖುಷಿ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಸೆಪ್ಟಂಬರ್ 1ಕ್ಕೆ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೇಲರ್ ಹಾಗೂ ಹಾಡುಗಳಿಗೆ ಭರಪೂರ ಮೆಚ್ಚುಗೆ ಸಿಕ್ಕಿದೆ. ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.

‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ರಿಲೀಸ್ ಆಗಲಿದೆ. ಮೈತ್ರಿ ಮೂವಿ ಬ್ಯಾನರ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಸಮಂತಾ ಹಾಗೂ ನಾಗಚೈತನ್ಯ ನಟಿಸಿದ್ದ ‘ಮಜಿಲಿ’ ಸಿನಿಮಾದ ನಿರ್ದೇಶಕ ಶಿವ ನಿರ್ವಾಣ ಆಕ್ಷನ್ ಕಟ್ ಹೇಳಿದ್ದಾರೆ.

ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ‘ಖುಷಿ’ ಸಿನಿಮಾದಲ್ಲಿ ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವೆನ್ನೆಲಾ ಕಿಶೋರ್, ರೋಹಿಣಿ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹೇಷಾಂ ಅಬ್ದುಲ್ ವಹಾಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ. ಸಾಲು ಸಾಲು ಸೋಲು ಕಂಡಿರುವ ವಿಜಯ್ ದೇವರಕೊಂಡಗೆ ಖುಇಷಿ ಸಕ್ಸಸ್ ಕೊಡಲಿದೆ ಎಂಬ ನಿರೀಕ್ಷೆ ಹೆಚ್ಚಿಸಿದೆ.

Related Posts

error: Content is protected !!