ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು,ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.
ಫೈರ್ ಫ್ಲೈ ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.
ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದರು.
ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.