ಘೋಸ್ಟ್ ಗೆ ಅಭಿಮಾನಿಗಳ ಪ್ರೀತಿಯ ಗಿಫ್ಟ್! ಹಾಡು ಉಡುಗೊರೆ ಕೊಟ್ಟ ಶಿವಣ್ಣ ಫ್ಯಾನ್ಸ್

ಸಂದೇಪ್ರೊಡಕ್ಷನ್ಸ್ ನಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸಿ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ‌
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಅಖಿಲ ಕರ್ನಾಟಕ ಡಾ.ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ “ಘೋಸ್ಟ್” ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ.

ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು. ಅಭಿಮಾನಿಗಳು ಅಭಿಮಾನದಿಂದ ನೀಡಿರುವ ಈ ಹಾಡನ್ನು ರೋಲಿಂಗ್ ಟೈಟಲ್ಸ್ ನಲ್ಲಿ ಬಳಸಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ.

ಅಕ್ಟೋಬರ್ 11 ರ ಮಧ್ಯಾಹ್ನ 1ಗಂಟೆಗೆ ಈ ಹಾಡು ಹೊಸಪೇಟೆಯ “ಮೀರ್ ಅಲ್ಲಂ” ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.

Related Posts

error: Content is protected !!