ಶಿವಮ್ಮ ಭಾರತಕ್ಕೆ ವಾಪಾಸ್! ಇದು ರಿಷಭ್ ಶೆಟ್ಟಿ ಸಂಸ್ಥೆ ಚಿತ್ರ

Press note:

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,” ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ.

ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ.

“ಶಿವಮ್ಮ” ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು,
ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ.

ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ
ಕಥೆಯಾಗಿದೆ.

ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಇದಾಗಿದೆ.


ಚಿತ್ರವು ಈಗಾಗಲೇ ಐದು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದು, ಚಿತ್ರದ ಟೀಸರ್ ಇಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಫಿಲಂಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

Related Posts

error: Content is protected !!