ಇಂಡಿಯನ್ 2 ಸಿನಿಮಾಗೆ ಸುದೀಪ್ ಸಾಥ್: ನ.3ಕ್ಕೆ ಕಮಲ್ ಚಿತ್ರದ ಫಸ್ಟ್ ಗ್ಲಿಂಪ್ಸ್

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬೀಳಲಿದ್ದು, ಕಮಲ್ ಹಾಸನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಚಿತ್ರದ ಇಂಟ್ರೋ ವೀಡಿಯೋ ನಾಳೆ ರಿಲೀಸ್ ಆಗ್ತಿದೆ.

ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಲಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು ಇದ್ದಾರೆ.

ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

Related Posts

error: Content is protected !!