ಮಿಸ್ಟರ್ ನಟ್ವರ್ ಲಾಲ್ ಹಾಡು ಬಂತು: ಹಾಡಿಗೆ ಎಲ್ಲೆಡೆ ಮೆಚ್ಚುಗೆ

ತನುಷ್ ಸಿನಿಮಾಸ್ ಬ್ಯಾನರ್ ನಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. ಹಾಡು ಎಲ್ಲೆಡೆ ಮೆಚ್ಚುಗೆ ಪಡೆದಿದೆ.

ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಅಚ್ಚಚ್ಚಚ್ಚು ಅಚ್ಚುಮೆಚ್ಚು” ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿ ವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ. ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿ.ಲವ ನಿರ್ದೇಶಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ “Mr ನಟ್ವರ್ ಲಾಲ್” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

Related Posts

error: Content is protected !!