ಬ್ಯಾಕ್ ಬೆಂಚರ್ಸ್ ಸಾಂಗ್ ರಿಲೀಸ್ ಮಾಡಿದ್ರು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್

ನೋಡುಗರಿಗೆ ಪರಿಶುದ್ಧ ಮನೋರಂಜನೆಯ ರಸದೌತಣ ಉಣಬಡಿಸಲು ಹೊಸತಂಡವೊಂದು ಸಿದ್ದವಾಗಿದೆ. ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ ” ಬ್ಯಾಕ್ ಬೆಂಚರ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಇತ್ತೀಚೆಗೆ ಈ ಚಿತ್ರದ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಕುಲ್ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆನ್ ಲೈನ್ ಮೂಲಕ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಸುಮಾರು ಒಂದು ವರ್ಷಗಳ ಕಾಲ ವರ್ಕ್ ಶಾಪ್ ನಡೆಸಿ ಈ ಚಿತ್ರದ ಚಿತ್ರೀಕರಣ ಮಾಡಿದ್ದೇವೆ‌ ಎಂದು ಮಾತನಾಡಿದ ನಿರ್ದೇಶಕ ಬಿ.ಆರ್ ರಾಜಶೇಖರ್, “ಬ್ಯಾಕ್ ಬೆಂಚರ್ಸ್” ಚಿತ್ರದಲ್ಲಿ ಮನೋರಂಜನೆ ಪ್ರಮುಖಾಂಶ. ಎಲ್ಲರಿಗೂ ಕಾಲೇಜು ದಿನಗಳನ್ನು ನೆನಪಿಸುವ ಚಿತ್ರವಿದು. ನಮ್ಮ ಚಿತ್ರದಲ್ಲಿ ಬೇರೆ ಏನು ಇಲ್ಲ.. ಮನೋರಂಜನೆಯೇ ಎಲ್ಲಾ.. ಮೂವತ್ತೈದು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ಸಾಕಷ್ಟು ಹೊಸ ಪ್ರತಿಭೆಗಳೆ ಹೆಚ್ಚಾಗಿ ಅಭಿನಯಿಸಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಹಾಗೂ ಮನೋಹರ್ ಜೋಶಿ ಅವರ ಛಾಯಾಗ್ರಹಣವಿದೆ ಎಂದರು.

ಚಿತ್ರದಲ್ಲಿ ಏಳು ಹಾಡುಗಳಿದೆ. ಮೊದಲ ಹಾಡು ಈಗ ಬಿಡುಗಡೆಯಾಗಿದೆ. ಜನಪ್ರಿಯ ಗೀತರಚನೆಕಾರರು ಹಾಗೂ ಗಾಯಕರ ಕಂಠಸಿರಿಯಲ್ಲಿ ಹಾಡುಗಳು ಮೂಡಿ ಬರುತ್ತಿದೆ. “ಲವ್ ಮಾಕ್ಟೇಲ್ 2” ಚಿತ್ರದ ನಂತರ ನಾನು ಸಂಗೀತ ನೀಡುತ್ತಿರುವ ಚಿತ್ರವಿದು ಎಂದು ಸಂಗೀತ ನಿರ್ದೇಶಕ ನಕುಲ್ ಭಯಂಕರ್ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎನ್ ಎಸ್ ಬಿ ಅಕಾಡೆಮಿ ಚೇರ್ಮನ್ ಶ್ರೀಧರ್ ಹಾಗೂ “Rajeev” “ಬ್ಯಾಕ್ ಬೆಂಚರ್ಸ್” ಗೆ ಶುಭ ಕೋರಿದರು.

ಚಿತ್ರದಲ್ಲಿ ನಟಿಸಿರುವ ಅರವಿಂದ್ ಕುಪ್ಳಿಕರ್, ರಂಜನ್ ನರಸಿಂಹಮೂರ್ತಿ, ಜತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್, ಅನುಶಾ ಸುರೇಶ್, ಮನೋಜ್ ಶೆಟ್ಟಿ, ನಮಿತಾ ಗೌಡ ಮುಂತಾದವರು ತಮ್ಮ ಪಾತ್ರ ಪರಿಚಯ ಮಾಡಿಕೊಂಡರು.

Related Posts

error: Content is protected !!