ಝೈದ್ ಖಾನ್ ಹೊಸ ಚಿತ್ರದ ಪೋಸ್ಟರ್ ರಿಲೀಸ್: ಇದು ಅನಿಲ್ ಕುಮಾರ್ ಚಿತ್ರ

“ಬನಾರಸ್” ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Related Posts

error: Content is protected !!