ಮಂಜುನಾಥನ ಎದರು ಗಾಡ್ ಪ್ರಾಮೀಸ್ ಅಂದ್ರು ಹೊಸಬರು!

ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಯುವ ಪ್ರತಿಭೆ ಸೂಚನ್ ಶೆಟ್ಟಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟನಾಗಿ ಬಣ್ಣ ಹಚ್ಚುವುದರ ಜೊತೆಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿಯೂ ಹೊಸ ಪಯಣ ಬೆಳೆಸಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ಪೂಜೆ ಸರಳವಾಗಿ ನೆರವೇರಿದೆ.

ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಇತ್ತೀಚೆಗಷ್ಟೇ ಸೂಚನ್ ಚೊಚ್ಚಲ ನಿರ್ದೇಶನದ ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ಪೂಜೆ ನಡೆದಿದೆ. ಪೂಜೆಯಲ್ಲಿ ಸೂಚನ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು. ಮೇ ಮೊದಲ ವಾರದಿಂದ ಗಾಡ್ ಪ್ರಾಮಿಸ್ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದೆ. ಚಿತ್ರೀಕರಣದ ಅಖಾಡಕ್ಕೆ ಇಳಿಯುವುದಕ್ಕೂ ಮೊದ್ಲೇ ಚಿತ್ರತಂಡ, ಆಡಿಷನ್ ಗೆ ಅವಕಾಶ ಕಲ್ಪಿಸಿಕೊಟ್ಟಿದೆ.

ಗಾಡ್ ಪ್ರಾಮಿಸ್ ತಂಡಕ್ಕೆ ತಲುಪಿದ್ದು 3800 ಅರ್ಜಿ

ಗಾಡ್ ಪ್ರಾಮಿಸ್ ಚಿತ್ರತಂಡ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಿಷನ್ ಕರೆಯಲಾಗಿದೆ. ಅದರಂತೆ ಆನ್ ಲೈನ್ ನಲ್ಲಿ ಬರೋಬ್ಬರಿ 3800 ಅರ್ಜಿಗಳು ತಲುಪಿವೆ. ಇದೇ ತಿಂಗಳ 31ರಂದು ಆಡಿಷನ್ ನಡೆಯುತ್ತಿದ್ದು, ಎಲ್ಲಾ ವರ್ಗದ ವಯೋಮಾನದವರು ಭಾಗಿಯಾಗಿ ತಮ್ಮ ಪ್ರತಿಭೆ ಪ್ರದರ್ಶಿಸಬಹುದು.

ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್ ಎರಡನೇ ಕಾಣಿಕೆ ಗಾಡ್ ಪ್ರಾಮಿಸ್. ಇದೀಗ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಮೊದಲ ಕನಸಿಗೆ ಜೊತೆಯಾಗಿದೆ.

ಗಾಡ್ ಪ್ರಾಮಿಸ್ ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಹೊಂದಿದೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ.

Related Posts

error: Content is protected !!