ಧರ್ಮ ಕೀರ್ತಿ ರಾಜ್ ಹೊಸ ಸಿನಿಮಾ: ಗೋಪಿನಾಥ ಬೆಟ್ಟದಲ್ಲಿ ಮುಹೂರ್ತ

ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ ೧” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.

ಆಕ್ಷನ್ ಡ್ರಾಮ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ. ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ.ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‌

ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Related Posts

error: Content is protected !!