ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಸಿಯೋನ್ ಟೈಟಲ್ ಫಿಕ್ಸ್..

ಕಮಲ್ ಹಾಸನ್ ನಿರ್ಮಾಣದಲ್ಲಿ ಶಿವಕಾರ್ತಿಕೇಯನ್ ಹೊಸ ಸಿನಿಮಾದ ಟೈಟಲ್ ರಿವೀಲ್…ಸಿಯೋನ್ ಆಗಿ ಬಂದ ಅಮರನ್ ಹೀರೋ

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ಕಮಲ್ ಹಾಸನ್ ಹಾಗೂ ಶಿವಕಾರ್ತಿಯೇನ್ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಈ ಹಿಂದೆ ಕಮಲ್ ನಿರ್ಮಿಸಿದ್ದ ಅಮರನ್ ಸೂಪರ್ ಹಿಟ್ ಕಂಡಿತ್ತು. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್ ನಾಯಕನಾಗಿ ನಟಿಸಿದ್ದರು. ಇದೀಗ ಈ ಜೋಡಿ ಸಿಯೋನ್ ಎಂಬ ಸಿನಿಮಾಗಾಗಿ ಮತ್ತೆ ಒಂದಾಗಿದ್ದಾರೆ.

ರಾಜ್ ಕಮಲ್ ಇಂಟರ್ನ್ಯಾಷನಲ್
ಹಾಗೂ ಟರ್ಮಿರಿಕ್ ಮೀಡಿಯಾ ಬ್ಯಾನರ್ ನಡಿ ಕಮಲ್ ಹಾಸನ್ ಹಾಗೂ ಆರ್ ಮಹೇಂದ್ರನ್ ನಿರ್ಮಾಣದಲ್ಲಿ ಸಿಯೋನ್ ಸಿನಿಮಾ ಮೂಡಿ ಬರ್ತಿದೆ. ಶಿವಕಾರ್ತಿಕೇಯನ್ ಹುಟ್ಟುಹಬ್ಬದ ವಿಶೇಷವಾಗಿ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ. ಹಣೆಯಲ್ಲಿ ವಿಭೂತಿ ಧರಿಸಿ, ಕೈಯಲ್ಲಿ ಕತ್ತಿ ಹಿಡಿದು ಶಿವಕಾರ್ತಿಕೇಯನ್ ಮಾಸ್ ಅವತಾರ ತಾಳಿದ್ದಾರೆ.

ಥಾಯ್ ಕಿಝವಿ ಸಿನಿಮಾ ನಿರ್ದೇಶಿಸಿರುವ ಶಿವಕುಮಾರ್ ಮುರುಗೇಶನ್ ಸಿಯೋನ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ‌. ಸಂತೋಷ್ ನಾರಾಯಣ್ ಸಂಗೀತ, ವಿವೇಕ್ ವಿಜಯಕುಮಾರ್ ಛಾಯಾಗ್ರಹಣ, ಸ್ಯಾನ್ ಲೋಕೇಶ್ ಸಂಕಲನ ಚಿತ್ರಕ್ಕಿದೆ. ಇದೇ ವರ್ಷ ಅಕ್ಟೋಬರ್ ತಿಂಗಳಲ್ಲಿ ವಿಶ್ವಾದ್ಯಂತ ಚಿತ್ರ ಬಿಡುಗಡೆ ಮಾಡಲು ಸಿನಿಮಾ ಟೀಂ ಯೋಜನೆ ಹಾಕಿಕೊಂಡಿದೆ.

Related Posts

error: Content is protected !!