ರೋಡ್ ರೋಮಿಯೋ ಬಗ್ಗೆ ಸಹಜವಾಗಿ ಎಲ್ಲರಿಗೂ ಗೊತ್ತೇ ಇರುತ್ತೆ. ಆದರೆ, ವೀಲ್ ಚೇರ್ ರೋಮಿಯೋ ಬಗ್ಗೆ ಬಹಳಷ್ಟು ಮಂದಿಗೆ ಗೊತ್ತಿರಲಿಕ್ಕಿಲ್ಲ. ಇಲ್ಲೊಬ್ಬ ವೀಲ್ ಚೇರ್ ರೋಮಿಯೋ ಬಗ್ಗೆ ಹೇಳಲೇಬೇಕು. ಇದು ಸಿನಿಮಾ ವಿಷಯ. ವಿಕಲಚೇತನನೊಬ್ಬನ ಲವ್ ಸ್ಟೋರಿ ಇಲ್ಲಿದೆ. ಹೌದು, ಇದೊಂದು ವೀಲ್ ಚೇರ್ ರೋಮಿಯೋ ಸಿನಿಮಾ.
ಕಾಲಿಲ್ಲದ ವ್ಯಕ್ತಿಯೊಬ್ಬ ವೀಲ್ ಚೇರ್ ಮೇಲೆ ಕುಳಿತು ತನ್ನ ಪ್ರೀತಿಗಾಗಿ ಪರಿತಪಿಸೋ ಕಥೆ ಇಲ್ಲಿದೆ. ಈ ಚಿತ್ರ ಈಗ ರಿಲೀಸ್ಗೂ ಸಜ್ಜಾಗಿದೆ. ಅದಕ್ಕೂ ಮುನ್ನ, ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಎಲ್ಲೆಡೆಯಿಂದಲೂ ಮೆಚ್ಚುಗೆ ಪಡೆಯುತ್ತಿದೆ. ಅಗಸ್ತ್ಯ ಕ್ರಿಯೇಷನ್ ಬ್ಯಾನರ್ನಲ್ಲಿ ವೆಂಕಟಾಚಲ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ನಲ್ಲಿ ಮನುಷ್ಯನ ಚಿಂತನಾ ಲಹರಿಗಳನ್ನು ಒಂದೊಂದಾಗಿ ಬಿಚ್ಚಿಡುವ ಪ್ರಯತ್ನ ಮಾಡಲಾಗಿದೆ.
ಜಿ.ನಟರಾಜ್ ಈ ಸಿನಿಮಾದ ನಿರ್ದೇಶಕರು. ಕಥೆ ಕೂಡ ಇವರದೇ. ಇನ್ನು, ಇಲ್ಲಿ ನಾಯಕಿಯಾಗಿ ಮಯೂರಿ ಕಾಣಿಸಿಕೊಂಡಿದ್ದಾರೆ. ಅವರದು ಇಲ್ಲಿ ಸ್ಪೆಷಲ್ ಪಾತ್ರ. ಅದು ಕಣ್ಣು ಕಾಣದ ವೇಶ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಮ್ ಚೇತನ್ ಹೀರೋ ಆಗಿ ನಟಿಸಿದ್ದಾರೆ.
ರಾಮ್ ಚೇತನ್, ಹೀರೋ
ಅವರಿಲ್ಲಿ ವೇಶ್ಯೆಯನ್ನು ಪ್ರೀತಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವೀಲ್ಚೇರ್ನಲ್ಲಿ ಕುಳಿತು ಪ್ರೀತಿಗಾಗಿ ಪರಿತಪಿಸುವ ವ್ಯಕ್ತಿಯಾಗಿ ನಟಿಸಿದ್ದಾರೆ. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಕಥೆ. ಇಲ್ಲೂ ಒಂದಿಷ್ಟು ಫೈಟಿಂಗ್ ದೃಶ್ಯಗಳಿವೆ. ಹೀರೋ ತಾನು ಪ್ರೀತಿಸುವ ವೇಶ್ಯೆಯನ್ನು ಆರಾಧಿಸುತ್ತಾನೆ. ಇದನ್ನು ತಿಳಿದ ತಂದೆ ತನ್ನ ಮಗನ ಮನಸ್ಸನ್ನು ಪರಿವರ್ತಿಸಲು ಪ್ರಯತ್ನ ಮಾಡುತ್ತಾನೆ. ಮುಂದೇನಾಗುತ್ತೆ ಅನ್ನೋದು ಚಿತ್ರದ ಕಥೆ. ಹಾಗಂತ ಇಲ್ಲಿ ಯಾವುದೇ ಧ್ವಂದಾರ್ಥವಿಲ್ಲ. ಶೀಲವಂತರ ಶೀಲದ ಕುರಿತು ಸಿನಿಮಾ ಮೂಡಿ ಬಂದಿದೆ. ಆದರಿಲ್ಲಿ ಅಂಧ ವೇಶ್ಯೆ ಕುರಿತ ಸಿನಿಮಾ. ಹಾಗಂತ ಎಲ್ಲೂ ಅಶ್ಲೀಲತೆ ಇಲ್ಲಿಲ್ಲ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಎಂಬುದು ಚಿತ್ರತಂಡದ ಮಾತು.
ವೆಂಕಟಾಚಲ, ನಿರ್ಮಾಪಕ
ಹಿರಿಯ ನಟ ಸುಚೇಂದ್ರ ಪ್ರಸಾದ್ ಕೂಡ ಸಿನಮಾ ಬಗ್ಗೆ ಸಾಕಷ್ಟು ನಂಬಿಕೆ ಇಟ್ಟಿದ್ದಾರೆ. ಒಳ್ಳೆಯ ಕಥಾಹಂದರ ಇರುವಂತಹ ಚಿತ್ರವಿದು ಎಂಬುದು ಅವರ ಮಾತು. ರಂಗಾಯಣ ರಘು ಇಲ್ಲೊಂದು ವಿಶೇಷ ಪಾತ್ರ ಮಾಡಿದ್ದಾರೆ.ಬಿಜೆ ಭರತ್ ಸಂಗೀತವಿದೆ. ಗಿರೀಶ್ ಶಿವಣ್ಣ ಸೇರಿದಂತೆ ಹಲವು ಕಲಾವಿದರು ಇಲ್ಲಲಿದ್ದಾರೆ.