ಒಂದು ಕಡೆ ಕೊರೊನಾ ಕಾಟ, ಇನ್ನೊಂದು ಕಡೆ ವ್ಯಾಕ್ಸಿನ್ ಗಾಗಿ ಪರದಾಟ…
ಇದು ಸದ್ಯದ ಪರಿಸ್ಥಿತಿ. ಹೌದು, ಈಗ ವ್ಯಾಕ್ಸಿನ್ ಕೊರತೆ ಹೆಚ್ಚಿದೆ. ಕೆಲವರಿಗೆ ಸಿಕ್ಕರೆ, ಇನ್ನೂ ಕೆಲವರಿಗೆ ಸಿಗುತ್ತಿಲ್ಲ. ಇದಕ್ಕೆ ಸಿನಿಮಾ ಮಂದಿಯೂ ಹೊರತಲ್ಲ. ಸರ್ಕಾರ ಎಲ್ಲರಿಗೂ ವ್ಯಾಕ್ಸಿನ್ ತಲುಪಿಸಲು ಹರಸಾಹಸ ಮಾಡುತ್ತಲೇ ಇದೆ. ಒಂದೊಂದು ಕ್ಷೇತ್ರದವರು ಸ್ವತಃ ಸರ್ಕಾರಕ್ಕೆ ಮನವಿ ಮಾಡಿ ವ್ಯಾಕ್ಸಿನ್ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಈಗ ಕನ್ನಡ ಚಿತ್ರರಂಗ ಕೂಡ ಸರ್ಕಾರದ ಗಮನ ಸೆಳೆದಿದ್ದು, ಸಿನಿಮಾದ ಎಲ್ಲಾ ಕಲಾವಿದರಿಗೂ ವ್ಯಾಕ್ಸಿನ್ ವ್ಯವಸ್ಥೆ ಮಾಡಿದೆ.
ಮೇ 31, ಮತ್ತು ಜೂನ್ 1ರ ಸೋಮವಾರ ಮತ್ತು ಮಂಗಳವಾರ ಈ ಎರಡು ದಿನ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೂ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ “ಕೋವಿಡ್ ಶಿಲ್ಡ್” ಲಸಿಕೆಯನ್ನು ಉಚಿತವಾಗಿ ನೀಡಲಾತ್ತಿದೆ.
ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ಕಲಾವಿದರು ಇದರ ಉಪಯೋಗ ಪಡೆದು ಕೊಳ್ಳಬೇಕೆಂದು ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಾಜರಾಗುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು, ಮಾಸ್ಕ್ ಧರಿಸಿರಬೇಕು ಮತ್ತು
ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಬೇಕು.
ಮೇ 31 ರ ಬೆಳಗ್ಗೆ 11.30ಕ್ಕೆ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್,
ಸಂಸದೆ ಸುಮಲತಾ ಅಂಬರೀಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಕಲಾವಿದ ದೊಡ್ಡಣ್ಣ ಸೇರಿದಂತೆ ಆರೋಗ್ಯ ಇಲಾಖೆಯ ಪ್ರಮುಖ ಅಧಿಕಾರಿ ಹಾಗೂ ಬಿಬಿಎಂಪಿ ಕಮಿಷನರ್ ಕೂಡ ಹಾಜರಿರುತ್ತಾರೆ ಎಂದು
ನಿರ್ದೇಶಕಿ ರೂಪ ಅಯ್ಯರ್ ಶ್ರೀವತ್ಸ ತಿಳಿಸಿದ್ದಾರೆ.