ಕನ್ನಡ ಚಿತ್ರರಂಗ ಈಗಷ್ಟೇ ಶುರುಗೊಂಡಿದೆ. ಕೊರೊನಾ ಬಳಿಕ ಒಂದೊಂದೇ ಸಿನಿಮಾಗಳು ಸೆಟ್ಟೇರುತ್ತಿವೆ. ಆ ಸಾಲಿಗೆ ಈಗ “ಕಡಲ ಮುತ್ತು” ಎಂಬ ಹೊಸಬರ ಸಿನಿಮಾ ಕೂಡ ಸೇರಿದೆ. ಈ ಚಿತ್ರವನ್ನು ದೇವರಾಜ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಅವರೇ ಹೀರೋ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿಂದೆ ಇವರು “ಡೇಂಜರ್ ಜೋನ್” ಮತ್ತು” ನಿಶಬ್ದ 2″ ಹಾಗೂ “ಅನುಷ್ಕಾ” ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಸದ್ಯ ” ತಾಜ್ ಮಹಲ್ -2 ” ನಿರ್ದೇಶನದೊಂದಿಗೆ, ಹೀರೋ ಆಗಿಯೂ ಕಾಣಿಸಿಕೊಂಡಿದ್ದಾರೆ. “ಕಡಲ ಮುತ್ತು” ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿರುವ ದೇವರಾಜ್ ಕುಮಾರ್ ಅವರು ನಿರ್ದೇಶನದ ಜೊತೆ ಕಥೆ, ಚಿತ್ರಕಥೆ ಜವಾಬ್ದಾರಿ ಹೊತ್ತಿದ್ದಾರೆ.
ದೇವರಾಜ್ ಕುಮಾರ್ ಅವರಿಗೆ ನಾಯಕಿಯ ಹುಡುಕಾಟ ನಡೆಯುತ್ತಿದೆ.
ಈ ಚಿತ್ರದ ಕಥಾವಸ್ತು ವಿಶೇಷವಾಗಿದ್ದು ಸಂಪೂರ್ಣ ಚಿತ್ರೀಕರಣ ಸಮುದ್ರ ದಂಡೆಯಲ್ಲಿ ನಡೆಯಲಿದೆ. ವೀನಸ್ ಮೂರ್ತಿ ಛಾಯಾಗ್ರಹಣವಿದೆ. ವಿಕ್ರಂ ಸೆಲ್ವ ಸಂಗೀತ ನಿರ್ದೇಶನ ಮಾಡಿದರೆ,
ರವೀಂದ್ರ ಮುದ್ದಿ ಸಾಹಿತ್ಯ ಬರೆದಿದ್ದಾರೆ. ಚಂದ್ರು ಬಂಡೆ ಸಾಹಸ ನಿರ್ದೇಶನವಿದೆ. ವಿಜಯ್ ಸಂಕಲನ ಹಾಗೂ ಬಿ.ಧನಂಜಯ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
45 ದಿನಗಳ ಕಾಲ ಮಂಗಳೂರು ಕುಂದಾಪುರ, ಉಡುಪಿ, ಕಾರವಾರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.