ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಕುಟುಂಬದೊಂದಿಗೆ ತಮಿಳುನಾಡಿನ ಗಾಜನೂರಿಗೆ ಭೇಟಿ ನೀಡಿ ರಿಲ್ಯಾಕ್ಸ್ ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆಯೇ ಶಿವಣ್ಣ ಹಾಗೂ ಅಪ್ಪು ಗಾಜನೂರಿನ ಮನೆಗೆ ಭೇಟಿ ಮಾಡಿ, ಅಣ್ಣಾವ್ರು ಧ್ಯಾನ ಮಾಡುತ್ತಿದ್ದ ಸ್ಥಳ, ತೋಟದಲ್ಲಿ ಸುತ್ತಾಡಿದ್ದಾರೆ.
ಅಣ್ಣಾವ್ರು ಅಕ್ಕರೆಯಿಂದ ಕಟ್ಟಿಸಿದ ಮನೆಯಲ್ಲಿ ಇಡೀ ಕುಟುಂಬದೊಂದಿಗೆ ಕುಳಿತು ಬಾಡೂಟ ಸೇವಿಸಿದ್ದು ಬಳಿಕ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.
ನೆಚ್ಚಿನ ಚಿತ್ರನಟರು ಬಂದಿರುವ ವಿಚಾರ ತಿಳಿದ ಅಭಿಮಾನಿಗಳು ಅಣ್ಣಾವ್ರ ಮನೆಗೆ ಮುಗಿಬಿದ್ದು ಸೆಲ್ಫಿ ಕ್ಲಿಕ್ಕಿಸಿ ಕೊಂಡು ಸಂಭ್ರಮಿಸಿದ್ದಾರೆ.