ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ತಮ್ಮ 50 ನೇ ವರ್ಷದ ಬರ್ತ್ ಡೇನಾ ಸಂಭ್ರಮ ಸಡಗರದಿಂದ ಆಚರಣೆ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ಮರುದಿನ ಅಭಿನಯ ಚಕ್ರವರ್ತಿ ಟೆಂಪಲ್ ರನ್ ಶುರು ಮಾಡಿದ್ದಾರೆ.
ಶುಕ್ರವಾರ ಬೆಳ್ಳಂ ಬೆಳಗ್ಗೆ ನಾಡ ದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ಕೊಟ್ಟಿದ್ದ ಕಿಚ್ಚ, ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅಲ್ಲಿಂದ ಹೊರಟು ಚನ್ನಪಟ್ಟಣದ ಗೌಡಗೆರೆಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ನೆರವೇರಿಸಿದ್ದಾರೆ.
ಕೋಟಿಗೊಬ್ಬ ಕಿಚ್ಚನ ಭೇಟಿಯ ಹಿನ್ನಲೆ ಅಭಿಮಾನಿಗಳ ದಂಡೇ ಸೇರಿತ್ತು. ಕಿಚ್ಚ.. ಕಿಚ್ಚ.. ಎಂತ ಘೋಷಣೆ ಕೂಗುತ್ತಾ ಅಭಿಮಾನಿಗಳು ಸಂಭ್ರಮಿಸಿದರು. ಮಾಣಿಕ್ಯನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳೋಕೆ ಮುಗಿಬಿದ್ದರು.