ದಸರಾ ಹಬ್ಬ ಈಗಷ್ಟೇ ಮುಗಿದಿದೆ. ಆದರೆ, ಸಿನಿಮಾ ಹಬ್ಬ ಜೋರಾಗಿದೆ. ಹೌದು, ಒಂದೊಂದೇ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರುತ್ತಿವೆ. ಸಿನಿಮಾ ಪ್ರೇಮಿ ಈಗ ಆ ಚಿತ್ರಗಳನ್ನು ಒಪ್ಪಿ ಅಪ್ಪಿಕೊಂಡಿದ್ದಾನೆ. ಆ ಸಾಲಿಗೆ ‘ನಿನ್ನ ಸನಿಹಕೆ’ ಚಿತ್ರವೂ ಸೇರಿದೆ.
ದೊಡ್ಡ ಚಿತ್ರಗಳ ಅಬ್ಬರದ ನಡುವೆಯೂ ನಿನ್ನ ಸನಿಹಕೆ ಚಿತ್ರವನ್ನ ಪ್ರೇಕ್ಷಕರು ಕೈ ಬಿಡಲಿಲ್ಲ ಎಂಬುದು ಚಿತ್ರತಂಡದ ಖುಷಿ. ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲೂ ನಿನ್ನ ಸನಿಹಕೆ ಚಿತ್ರಕ್ಕೆ ಬೇಡಿಕೆ ಹೆಚ್ಚಿದೆ.
ಬೆಂಗಳೂರು, ಮೈಸೂರು, ಶಿವಮೊಗ್ಗ ದಲ್ಲಿ ಫುಲ್ ಹೌಸ್ ಪ್ರದರ್ಶನ ಕಾಣುತ್ತಿದೆ.
10ರಲ್ಲಿ 7 ಸ್ಕ್ರೀನ್ ಹೌಸ್ ಫುಲ್. 3 ಸ್ಕ್ರೀನ್ 90% ಫಿಲ್ ಅಗಿರುವುದು ತಂಡದ ಉತ್ಸಾಹಕ್ಕೆ ಕಾರಣವಾಗಿದೆ.
ಹಬ್ಬ, ವೀಕೆಂಡ್ ನಲ್ಲಿ ಚಿತ್ರಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ. ಹೀಗಾಗಿ ಸ್ಕ್ರೀನ್ ಹೆಚ್ಚಿಸಲು ಕೆ.ಆರ್.ಜಿ ಸ್ಟುಡಿಯೋಸ್ ನಿರ್ಧರಿಸಿದೆ.
ರಾಜ್ಯದಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್ ನಲ್ಲೂ ನಿನ್ನ ಸನಿಹಕೆ ಪ್ರದರ್ಶನಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದೆ.
ಪ್ರೇಕ್ಷಕ ಹಾಗೂ ವಿಮರ್ಶಕರಿಂದ ಉತ್ತಮ ಪ್ರಶಂಸೆ ಪಡೆದುಕೊಂಡಿರೋ ಚಿತ್ರದ ವೇಗ ಇನ್ನಷ್ಟು ಹೆಚ್ಚಿದೆ.
ದೊಡ್ಡ ಚಿತ್ರಗಳ ಆಗಮನದಿಂದ ಥಿಯೇಟರ್ ಮತ್ತು ಸ್ಕ್ರೀನ್ಸ್ ಸಮಸ್ಯೆ ಎದುರಿಸಿದ್ದ ಚಿತ್ರತಂಡ. ಇದೀಗ ಪ್ರೇಕ್ಷಕರ ಒತ್ತಾಯ ನೋಡಿ ಪರದೆಗಳನ್ನು ಹೆಚ್ಚಿಸಲು ವಿತರಕರು ಮುಂದಾಗ್ತಿದ್ದಾರೆ. ಈ ಬೆಳವಣಿಗೆಯಿಂದ ಸಹಜವಾಗಿಯೇ ಚಿತ್ರತಂಡ ಖುಷಿಯಲ್ಲಿದೆ.






